ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಪ್ರಮುಖರಾದ ಭಾಸ್ಕರ್ ಟಿ, ಸವಿತಾ ಎರ್ಮಾಳ್, ದಿನೇಶ್ ಮೊದಲಾದವರಿದ್ದರು.  
ಜಿಲ್ಲೆ

ಎನ್ನೆಸ್ಸೆಸ್ಸ್‌ನಿಂದ ನಾಯಕತ್ವ ಗುಣ ವೃದ್ಧಿ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಕಾರ್ಕಳ

ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ಎನ್ನೆಸ್ಸೆಸ್ಸ್ ಶಿಬಿರಗಳು ಅತ್ಯಂತ ಪ್ರಯೋಜಕಾರಿ. ಸ್ವಯಂ ಸೇವಕರಾಗಿ ದುಡಿಯುವ ಮನೋಭಾವ ಜತೆಗೆ ನಾಯಕತ್ವ ಗುಣ ಬೆಳೆಸಿಕೊಳ್ಳಲು ಶಿಬಿರ ಪ್ರಯೋಜನಕಾರಿ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್ ಟಿ. ಹೇಳಿದರು.

ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕಲಂಬಾಡಿ ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ಎನ್ನೆಸ್ಸೆಸ್ಸ್ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಶುಭಹಾರೈಸಿದರು. ನಿಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಧ್ವಜಾರೋಹಣ ನೆರವೇರಿಸಿದರು. ಉದ್ಯಮಿ ನವೀನ್ ನಾಯಕ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ.ಕೊಡವೂರು, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜು ಪ್ರಾಂಶುಪಾಲ ಗಣೇಶ್ ಶೆಟ್ಟಿ, ಕಾರ್ಕಳ ಪ.ಪೂ. ಕಾಲೇಜು ಉಪಪ್ರಾಂಶುಪಾಲೆ ಉಷಾ ರಾವ್ ಯು, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಕಲಂಬಾಡಿ ಪದವು ಶಾಲೆ ಮುಖ್ಯ ಶಿಕ್ಷಕ ನಾಗರಾಜ್ ಬಿ, ಹಳೇ ವಿದ್ಯಾರ್ಥಿ ಸಂಘ ಸ್ಥಾಪಕಾಧ್ಯಕ್ಷ ಸುರೇಶ್ ಆಚಾರ್ಯ, ಅಧ್ಯಕ್ಷ ರೂಪೇಶ್ ಕುಲಾಲ್, ಎಸ್‌ಡಿಎಂಸಿ ಅಧ್ಯಕ್ಷೆ ಸಂಗೀತಾ ಬಿ.ಎನ್ ಉಪಸ್ಥಿತರಿದ್ದರು. ರವಿ ಜಿ. ಸ್ವಾಗತಿಸಿದರು. ಸಂತೋಷ್ ನೆಲ್ಲಿಕಾರು ನಿರೂಪಿಸಿದರು.