ಜಿಲ್ಲೆ

ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆಧ್ಯತೆ: ಎ.ಎಸ್.ಪೊನ್ನಣ್ಣ

ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆಧ್ಯತೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿರವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.


ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಶಾದಿಮಲ್‌ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ವಿರಾಜಪೇಟೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಗುರಿ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯನ್ನು ಎಲ್ಲರೂ ಬಳಸಿ, ಸರ್ಕಾರದ ಯೋಜನೆಯ ಲಾಭವನ್ನು ಪಡೆಯಿರಿ. ಎಲ್ಲರೂ ಸಾಮಾಜಿಕ ಭದ್ರತೆ ಹಾಗೂ ಸೌಹಾರ್ದತೆಯಿಂದ ಪರಸ್ಪರ ಅನ್ಯೋನ್ಯತೆಯಿಂದ ಬದುಕಬೇಕು. ಕೊಂಡಂಗೇರಿ ಗ್ರಾಮಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.


ಹಾಲುಗುಂದ ಗ್ರಾಮ ಪಂಚಾಯತಿ ಸದಸ್ಯ ಅಬ್ದುರಹಮಾನ್(ಅಂದಾಯಿ) ಮಾತನಾಡಿ, ವಿರಾಜಪೇಟೆ ಕ್ಷೇತ್ರದಲ್ಲಿ ೨೦ ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಲು ಕೊಂಡಂಗೇರಿ ಗ್ರಾಮದ ಜನತೆ ದೊಡ್ಡ ಕೊಡುಗೆ ನೀಡಿದ್ದಾರೆ. ಪ್ರತೀ ಬಾರಿಯ ಚುನಾವಣೆಯಲ್ಲಿ ಕೊಂಡಂಗೇರಿ ಗ್ರಾಮಸ್ಥರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ೨೦೧೯ರಲ್ಲಿ ಕೊಂಡಂಗೇರಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಪರಿಹಾರ ಸಿಗದ ಸಂತ್ರಸ್ತರಿಗೆ ಪರಿಹಾರ ನೀಡಲು ಶಾಸಕರು ಕೂಡಲೇ ಕ್ರಮವಹಿಸಬೇಕೆಂದು ಮನವಿ ಮಾಡಿದರು.


ಕೊಂಡಂಗೇರಿಯಲ್ಲಿ ರಸ್ತೆ ಸಮಸ್ಯೆ ಹಾಗೂ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಅವಶ್ಯಕತೆ ಇದ್ದು ಶಾಸಕರು ಇದರ ಬಗ್ಗೆ ಗಮನಹರಿಸಬೇಕಾಗಿ ಶಾಸಕರಿಗೆ ಮನವಿ ಮಾಡಿದರು.


ಕೊಂಡಂಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಎ.ಎಂ.ಅಬ್ದುಲ್ಲರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ರಫೀಕ್ ರವರಿಗೆ ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಯೂಸುಫ್ ಹಾಜಿ ಕೊಂಡಂಗೇರಿರವರು ಶಾಸಕ ಎ.ಎಸ್.ಪೊನ್ನಣ್ಣರವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.


ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ.ಶಾದುಲಿ, ಹಾಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸೀತೆ ಬೊಳ್ಳಿ, ಉಪಾಧ್ಯಕ್ಷ ದಿನೇಶ್ (ಕುಶ), ಕೊಂಡಂಗೇರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಕೆ.ಯೂಸುಫ್ ಹಾಜಿ, ಸಿ.ಎಂ.ಹಂಸ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಕೊಂಡಂಗೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಝಕರೀಯ, ಕಾಂಗ್ರೆಸ್ ಕಾರ್ಯಕರ್ತರಾದ ಸಾಮೀರ್, ಇಸ್ಮಾಯಿಲ್, ಶಿಯಾಬ್ ಇದ್ದರು.