ವಿಜಯವಾಣಿ ಸುದ್ದಿಜಾಲ ಧಾರವಾಡ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್. ದೊಡ್ಡಮನಿ ಅವರು ಮಹಾನಗರ ಪಾಲಿಕೆಯ ಅಕಾರಿಗಳು ಮತ್ತು ಹಿರಿಯ ನಾಗರಿಕರೊಂದಿಗೆ ನಗರದ ಕೆಲಗೇರಿ ಕೆರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನ. 23ರಂದು ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕೆಲಗೇರಿ ಕೆರೆಗೆ ಭೇಟಿ ನೀಡಿದ್ದರು. ಕೆರೆಯ ಸುತ್ತ ಬೆಳೆದಿದ್ದ ಕಳೆ ಮತ್ತು ಕಸವನ್ನು 20 ದಿನಗಳೊಳಗೆ ಪಾಲಿಕೆಯಿಂದ ಸ್ವಚ್ಛಗೊಳಿಸಬೇಕು ಮತ್ತು ಕೃಷಿ ವಿಶ್ವವಿದ್ಯಾಲಯದವರು ಕೆರೆಯಲ್ಲಿನ ಜಲ ಕಳೆ ತೆಗೆಯಬೇಕು ಎಂದು ನಿರ್ದೇಶಿಸಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹಾಗೂ ಇತರರು ಕೆರೆಗೆ ಭೇಟಿ ನೀಡಿದ್ದರು. ಕೆರೆಯ ಸುತ್ತ ಅಲ್ಲಲ್ಲಿ ಪ್ಲಾಸ್ಟಿಕ್ ಲೋಟಗಳು, ಗಾಜಿನ ಬಾಟಲಿ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆದಿರುವುದು ಕಂಡುಬ0ತು. ಕೃಷಿ ವಿಶ್ವವಿದ್ಯಾಲಯದವರು ತೆಗೆಯಬೇಕಿದ್ದ ಜಲಕಳೆ ಹಾಗೇ ಇರುವುದು ಕಾಣಿಸಿತು. ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ನೀಡಿದ್ದ ನಿರ್ದೇಶನಗಳನ್ನು ಪಾಲಿಸಿ, ಕೆರೆ ಸ್ವಚ್ಛಗೊಳಿಸಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ, ಮಹಾನಗರ ಪೊಲೀಸ್ ಆಯುಕ್ತ ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಜಿಲ್ಲಾ ಕಾನೂನು ಸೇವಾ ಪ್ರಾಽಕಾರಕ್ಕೆ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಸ್. ಮಿತ್ತಲಕೋಡ, ಪಾಲಿಕೆಯ ಕಿರಿಯ ಇಂಜಿನಿಯರ್ ವೀರೇಶ ಕುಂಬಾರ, ಪಾಲಿಕೆಯ ಸಿಬ್ಬಂದಿ ಮತ್ತು ಹಿರಿಯ ನಾಗರಿಕರು ಉಪಸ್ಥಿತರಿದ್ದರು.