ರಾಯಚೂರು ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಅ.5ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಬುದ್ದವಾಸಿ ಬುದ್ದಗೋಷ್ ದೇವೇಂದ್ರ ಹೆಗಡೆರವರ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಸಂಚಾಲಕ ರವೀಂದ್ರನಾಥ ಪಟ್ಟಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಅನೇಕ ಪ್ರಗತಿಪರ, ದಲಿತ ಸಂಘಟನೆಗಳ ಚಿಂತಕರು ಆಗಮಿಸಲಿದ್ದಾರೆ. ಬುದ್ದವಾಸಿ ದೇವೇಂದ್ರ ಹೆಗಡೆಯವರು ಸೆ.21ರಂದು ಬುದ್ದವಾಸಿಯಾಗಿದ್ದು, ಅನೇಕ ದಲಿತಪರ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ.
ಕಲಬುರಗಿಯಲ್ಲಿ 2ನೇ ರಾಜ್ಯಮಟ್ಟದ ಸಮಾವೇಶವನ್ನು ನಡೆಸಿ ಸಮಾವೇಶದಲ್ಲಿ ಹೆಂಡ ಭೇಡ, ಸರಾಯಿ ಬೇಡ ಹೋಬಳಿಗೊಂದು ವಸತಿ ಶಾಲೆ ಬೇಕೆಂಬ ನಿರ್ಣಯಗಳನ್ನು ತೆಗೆದುಕೊಂಡು, ರಾಜ್ಯಾದ್ಯಂತ ಹೋರಾಟಗಳನ್ನು ಮಾಡಿದ್ದಾರೆ. ಅವರ ಹೋರಾಟದ ಫಲವಾಗಿ ಇಂದು ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಕಾಣಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಆರ್.ಭೇರಿ, ವೈ.ನರಸಪ್ಪ, ಕೆ.ನರಸಿಂಹಲು, ಭಾಸ್ಕರರಾಜ್, ಯಲ್ಲಪ್ಪ, ಮಹೇಶ, ಸಂತೋಷ ಇದ್ದರು.