ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು.
ಮಂಗಳೂರು: ಬೋಳೂರು ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ ಮೇ 28 ಮತ್ತು 29ರಂದು ನಡೆಯಲಿರುವ ಅಮೃತ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು.
ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್, ಡಾ.ಜೀವರಾಜ್ ಸೊರಕೆ, ಸಿಎ ವಾಮನ್ ಕಾಮತ್, ಡಾ.ವಸಂತ ಕುಮಾರ್ ಪೆರ್ಲ, ಸಿಎ ರಾಮನಾಥ್ ಮೊದಲಾದವರಿದ್ದರು.
7 ವರ್ಷಗಳ ಬಳಿಕ ಮಂಗಳೂರಿಗೆ ಆಗಮಿಸಿದ ಅಮ್ಮ ಸಮಾಜಮುಖಿ ಮಾನವೀಯ ಸೇವಾ ಯೋಜನೆಗಳಿಗೆ ಚಾಲನೆ ನೀಡುವರು. ಅಮ್ಮನ ಸತ್ಸಂಗ, ಭಜನೆ, ಧ್ಯಾನ, ಅಮೃತಾಲಿಂಗನ ಜರುಗಲಿದೆ.