ಜಿಲ್ಲೆ

ಆದಿಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

Chikkamagaluru

ಮೂಡಿಗೆರೆ: ಜಿ.ಅಗ್ರಹಾರದ ಶ್ರೀ ಆದಿಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಬುಧವಾರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ಶ್ರೀ ಆದಿಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಥೋತ್ಸವಕ್ಕೂ ಮುನ್ನ ಸ್ವಾಮಿಯ ಮೂಲ ವಿಗ್ರಹವನ್ನು ಉತ್ಸವದೊಂದಿಗೆ ಕರೆತಂದು ಬೆಳ್ಳಿ ರಥದಲ್ಲಿ ಕೂರಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಗರಡುವೊಂದು ಆಕಾಶದಲ್ಲಿ ಹಾರಾಡುತ್ತ ರಥ ಮೇಲೆ ಮೂರು ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವ ಆರಂಭವಾಯಿತು. ಈ ದೃಶ್ಯ ನೋಡಲು ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಆವರಣವನ್ನು ತಳಿರು, ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯುತ್ ದೀಪಗಳು ಹಾಗೂ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಜಾತ್ರೆಗೆ ತೆರಳುವ ಜನರಿಗೆ ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.