ಕುಂದಾಪುರ: ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಕುಂದಾಪುರ ತಾಲೂಕಿನಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು.
ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ರೋಯ್ ಲೋಬೊ, ಸಹಾಯಕ ಧರ್ಮಗುರು ವಿಲ್ಸನ್ ಸಲ್ಡಾನಾ ಉಪಸ್ಥಿತರಿದ್ದರು. ಕುಂದಾಪುರ ತಾಲೂಕಿನ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ್ತ ಬಾಂಧವರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಚರ್ಚ್‌ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.