ನಂಜನಗೂಡು: ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಧನುರ್ಮಾಸ ಪ್ರಯುಕ್ತ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಕರ್ತೃ ಗದ್ದುಗೆ, ಶ್ರೀ ಮಹದೇಶ್ವರ, ಶ್ರೀ ಸೋಮೇಶ್ವರ, ಶ್ರೀ ವೀರಭದ್ರೇಶ್ವರ ಮತ್ತು ಶ್ರೀ ನಾರಾಯಣಸ್ವಾಮಿ ದೇವಸ್ಥಾನಗಳಲ್ಲಿ ಡಿ.16ರಿಂದ ಜನವರಿ 14ರವರೆಗೆ ಪ್ರತಿದಿನ ಪ್ರಾತಃಕಾಲ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದೆ. ಹಿಂದಿನ ದಿನ ಆಗಮಿಸುವ ಸೇವಾರ್ಥದಾರರಿಗೆ ಆಸನ ಮತ್ತು ವಸತಿ ವ್ಯವಸ್ಥೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.