ಬೈಂದೂರು: ಜಿಲ್ಲಾ ಆಡಳಿತ, ಜಿಪಂ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಪಂ ಉಡುಪಿ ವತಿಯಿಂದ ಬುಧವಾರ ನಡೆದ ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಧನ್ವಿ ಮರವಂತೆ ಆರ್ಟಿಸ್ಟಿಕ್ ಸ್ಪರ್ಧೆಯಲ್ಲಿ ವಿಜೇತರಾಗಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.