ಕೋಟ: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಧನ್ಯಶ್ರೀ ಶೇ.94.75 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಬ್ರಹ್ಮಾವರ ಲಿಟಲ್‌ರಾಕ್ ಇಂಡಿಯನ್ ಸ್ಕೂಲ್ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ರಾಧಾಕೃಷ್ಣ ನೃತ್ಯ ನಿಕೇತನ ಉಡುಪಿ ನೃತ್ಯಗುರು ವಿದುಷಿ ವೀಣಾ ಎಂ.ಸಾಮಗ ಮಾರ್ಗದರ್ಶನ ನೀಡುತ್ತಿದ್ದಾರೆ. ಪುಂಡರೀಕ ಮತ್ತು ಸುಮಂಗಲ ದಂಪತಿ ಪುತ್ರಿ.