ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಿದ್ಧಲಿಂಗ ಮಹಾರಾಜರ ಕಮರಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಟರಾಜ ಎಲ್.ಎಂ. ಅವರು ಪ್ರಮಾಣಪತ್ರ ವಿತರಿಸಿದರು. 
ಜಿಲ್ಲೆ

ಧರ್ಮಸ್ಥಳ ಸಂಸ್ಥೆ ಗ್ರಾಮೀಣರಲ್ಲಿ ಸಂಸ್ಕೃತಿ ಬೆಳೆಸಬಲ್ಲದು

Vijayapura - Desk - Gurappa Lokuri

ಇಂಡಿ: ಧರ್ಮಸ್ಥಳ ಸಂಸ್ಥೆಯು ಗ್ರಾಮೀಣ ಪ್ರದೇಶದ ಶ್ರೀ ಸಾಮಾನ್ಯರಲ್ಲಿ ಧರ್ಮಜಾಗೃತಿ ಮೂಡಿಸಿ ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಹೇಳಿದರು.

ತಾಲೂಕಿನ ಲಚ್ಯಾಣ ಗ್ರಾಮದ ಸಿದ್ಧಲಿಂಗ ಮಹಾರಾಜರ ಕಮರಿ ಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರುಡ್‌ಸೆಟ್ ಸಂಸ್ಥೆ ವಿಜಯಪುರ ಸಹಭಾಗಿತ್ವದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸೃಜನಶೀಲ ಕಾರ್ಯಕ್ರಮದಲ್ಲಿ ಮೃಧು ಗೊಂಬೆಗಳ ತಯಾರಿಕೆ ಹಾಗೂ ಮಾರಾಟ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಸ್ವತಂತ್ರವಾಗಿ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡು ಆರ್ಥಿಕ ಸಬಲರಾಗಬೇಕೆಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಹಾಗೂ ಮಾತೋಶ್ರೀ ಹೇಮಾವತಿ ಹೆಗ್ಗಡೆ ಅವರ ಆಶಯದಂತೆ ಇಂತಹ ತರಬೇತಿ ಕಾರ್ಯಕ್ರಮಗಳು ನಿರಂತರ ನಡೆಯಲಿವೆ. ಇಂತಹ ಸ್ವಯಂ ಉದ್ಯೋಗ ತರಬೇತಿ ಪಡೆಯುವವರಿಗಾಗಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಮುತ್ತಣ್ಣ ಧನಕರ್, ಐಟಿಐ ಕಾಲೇಜು ಪ್ರಾಚಾರ್ಯ ಪಿ.ಬಿ. ಉಪ್ಪಾರ, ಉಪನ್ಯಾಸಕ ಜಗದೀಶ ಪೂಜಾರಿ, ವಲಯ ಮೇಲ್ವಿಚಾರಕ ಹುಸೇಸಾಬ ಕಾಗದ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ ಎಂ. ಮತ್ತಿತರರಿದ್ದರು.