ಭರಮಸಾಗರ: ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳಾ ಸಬಲೀಕರಣಗೊಳ್ಳಲಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಹೇಳಿದರು.
ಸಂಸ್ಥೆ ವತಿಯಿಂದ ಬೊಮ್ಮೇನಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಗಂಗೋತ್ರಿ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಜನರ ಪರ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಡಿಪಿಒ ಸುಧಾ, ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಪಿಡಿಒ ಇರ್ಫಾನ್ ಉಲ್ಲಾ , ಸುಮಾ, ಸಂತೋಷ್, ಶಿವಲೀಲಾ, ನಂದಿನಿ, ಶೀಲಾ, ಲಾವಣ್ಯಾ ಇತರರಿದ್ದರು.