ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಕಾಪು ವಿಧಾನಸಭಾ ವ್ಯಾಪ್ತಿಯ ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ಎದುರು ಏಕಕಾಲದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿವಿಧ ಗ್ರಾಪಂಗಳಿಗೆ ಭೇಟಿ ನೀಡಿ ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿದರು.
ವಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಕಾಪು ಪುರಸಭೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಪ್ರಮುಖರಾದ ಸಂದೀಪ ಶೆಟ್ಟಿ, ಚಂದ್ರ ಮಲ್ಲಾರು ಮತ್ತಿತರರಿದ್ದರು.
ಪಡುಬಿದ್ರಿ ಗ್ರಾಪಂ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಮಹಿಳಾಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಗ್ರಾಪಂ ಅಧ್ಯಕ್ಷೆ ಶಶಿಕಲಾ ವೈ, ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್, ಪ್ರಮುಖರಾದ ಶಶಿಕಾಂತ ಪಡುಬಿದ್ರಿ, ರವಾಕಾಂತ ದೇವಾಡಿಗ, ರವಿ ಶೆಟ್ಟಿ, ಮಿಥುನ್ ಆರ್ ಹೆಗ್ಡೆ ಉಪಸ್ಥಿತರಿದ್ದರು.
ಹೆಜವಾಡಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಗುರ್ಮೆ ವಾತನಾಡಿದರು. ಗ್ರಾಪಂ ಅಧ್ಯಕ್ಷೆ ರೇಷ್ಮಾ ಮೆಂಡನ್, ಮೋಹನ್ ಸುವರ್ಣ, ರವಿ ಎಚ್ ಕುಂದರ್, ಪ್ರಾಣೇಶ್ ಹೆಜವಾಡಿ, ಶರಣ್ ಕುವಾರ್ ಮಟ್ಟು ಪಾಲ್ಗೊಂಡಿದ್ದರು.
ಮುದರಂಗಡಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ಶಿವರಾಮ್ ಭಂಡಾರಿ ನೇತೃತ್ವದಲ್ಲಿ ಮುದರಂಗಡಿ ಗ್ರಾಪಂ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ ಅವರು, ಸರ್ಕಾರ ಬಡವರ ಮೇಲೆ ವಾಡುತ್ತಿರುವ ಧೋರಣೆ ಖಂಡಿಸಿದರು. ಗ್ರಾಪಂ ಉಪಾಧ್ಯಕ್ಷೆ ಮೋಹಿನಿ ಆರ್ ಹೆಗ್ಡೆ, ಸದಸ್ಯರುಗಳಾದ ಯೋಗಿನಿ ಶೆಟ್ಟಿ, ರವೀಂದ್ರ ಪ್ರಭು, ಶರತ್ ಶೆಟ್ಟಿ, ಇಂದಿರಾ ಆಚಾರ್ಯ ಮತ್ತಿತರರು ಭಾಗವಹಿಸಿದ್ದರು.