ಸಂತೋಷ ಲಾಡ್ 
ಧಾರವಾಡ

citizens ನಾಗರಿಕರಿಂದ 151 ಅಹವಾಲು ಸಲ್ಲಿಕೆ

ರವಿ ಎಸ್. ಬಳೂಟಗಿ
ಕುಂದಗೋಳ: ತಾಲೂಕಿನ ಬೆನಕನಹಳ್ಳಿ, ಸಂಶಿ, ಕಮಡೊಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನಸಂಪರ್ಕ (citizens) ಸಭೆ ಸಾಕಷ್ಟು ಸಮಸ್ಯೆಗಳ ಪ್ರಸ್ತಾಪಕ್ಕೆ ವೇದಿಕೆಯಾಯಿತು.
ಇಲ್ಲಿನ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಾರ್ವಜನಿಕರ 151 ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಕಂದಾಯ ಇಲಾಖೆ ಕುರಿತಂತೆ ಅತೀ ಹೆಚ್ಚು ಅಂದರೆ 48 ಅಹವಾಲುಗಳು ಸಭೆಯಲ್ಲಿ ಸಲ್ಲಿಕೆಯಾದವು. ಇನ್ನು ಕುಡಿಯುವ ನೀರಿನ ಕೊರತೆ, ರಸ್ತೆ ದುರಸ್ತಿ, ಪಿಂಚಣಿ ವಿಳಂಬ, ನಮ್ಮ ಹೊಲ ನಮ್ಮ ರಸ್ತೆ ಯೋಜನೆ, ಕಾರ್ಮಿಕ ಇಲಾಖೆಯ ಸೌಲಭ್ಯಗಳು ಹಾಗೂ ವಿದ್ಯುತ್ ವ್ಯತ್ಯಯದ ಬಗ್ಗೆ ಜನರಿಂದ ಅತಿ ಹೆಚ್ಚು ದೂರುಗಳು ಕೇಳಿಬಂದವು. ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಎಸ್ಪಿ ಗುಂಜನ್ ಆರ್ಯ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ, ತಹಸೀಲ್ದಾರ್ ರಾಜು ಮಾವರಕರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.