ಹುಬ್ಬಳ್ಳಿ: ಗೋಲಗುಂಬಜ್ ಎಕ್ಸಪ್ರೆಸ್ ರೈಲಿನಲ್ಲಿ ಬಾಗಲಕೋಟೆಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರೊಬ್ಬರ 3 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಮಂಗಳಸೂತ್ರ ಹಾಗೂ 30 ಸಾವಿರ ರೂ. ಮೌಲ್ಯದ 2 ಮೊಬೈಲ್ ಫೋನ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿದ್ದಾಗ ಕಳವಾಗಿದೆ.
ಬೀಳಗಿ ತಾಲೂಕಿನ ಕೊಪ್ಪ ಗ್ರಾಮದ ವೆಂಕಪ್ಪ ಪರಡ್ಡಿ, ಪತ್ನಿ ಜತೆಗೆ ತೆರಳುತ್ತಿದ್ದಾಗ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಆಭರಣ, ಫೋನ್ ಕಳವಾಗಿದೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.