(government) ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ.
- ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಸಕ್ತಿ ಇಲ್ಲ.
- ಶಿಕಾರಿಪುರಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ.
- ವ್ಯವಹಾರದಲ್ಲಿ ಪಾಲುದಾರರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ. ಉಸ್ತುವಾರಿ ಸಚಿವರಿಗೆ ತಮ್ಮ ಜಿಲ್ಲೆ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಸಕ್ತಿ ಇಲ್ಲ. ಬದಲಾಗಿ, ಹಣ ವಸೂಲಿಗಾಗಿ ಓಡಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಆರೋಪ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ವ್ಯವಹಾರದಲ್ಲಿ ಪಾಲುದಾರರು. ಇದೇ ಕಾರಣಕ್ಕೆ ಡಿ. ಕೆ. ಶಿವಕುಮಾರ ಅವರು ಶಿಕಾರಿಪುರಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ ಎಂದು ಹೇಳಿದರು.