late ಬಿಜೆಪಿ ಮುಖಂಡ ದಿ. ಸತೀಶ ಶೇಜವಾಡಕರ ಅವರ ನುಡಿನಮನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಶಿವು ಮೆಣಸಿನಕಾಯಿ ಹಾಗೂ ಇತರರು ಪಾಲ್ಗೊಂಡಿದ್ದರು.
- ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು.
- ಆಹಾರದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು.
- ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗುವುದು.
ಹುಬ್ಬಳ್ಳಿ :
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಸತೀಶ ಶೇಜವಾಡಕರ ಅವರು ಕ್ರಿಯಾಶೀಲ ವ್ಯಕ್ತಿತ್ವದವರಾಗಿದ್ದು, ಪಕ್ಷದಲ್ಲಿ ಅನೇಕ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು ಎಂದು ಸ್ಮರಿಸಿದರು.
ಸತೀಶ ಶೇಜವಾಡಕರ ಅವರು ಅಧಿಕಾರಕ್ಕಾಗಿ ಕೆಲಸ ಮಾಡಲಿಲ್ಲ. ಪಕ್ಷದ ಸಂಘಟನೆ, ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರನ್ನು ಕಳೆದುಕೊಂಡು ಪಕ್ಷ ಹಾಗೂ ಸಮಾಜಕ್ಕೆ ಭಾರಿ ಆಘಾತವಾಗಿದೆ ಎಂದರು.
ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸರಿಯಾದ ಸಮಯದಲ್ಲಿ ವೈದ್ಯರ ಸಲಹೆ ಪಡೆದು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಹಾರದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಪಕ್ಷದ ಪದಾಧಿಕಾರಿಗಳಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಮಹಾನಗರ ಜಿಲ್ಲಾದ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ದಿ. ಸತೀಶ ಶೇಜವಾಡಕರ ಅವರು ಪಕ್ಷಕ್ಕೆ ಆದರ್ಶವಾಗಿದ್ದರು. ಪಕ್ಷ ಮತ್ತು ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಅವರು ಮಾತನಾಡಿ, ದಿ. ಸತೀಶ ಶೇಜವಾಡಕರ ಅವರಿಗೆ ನುಡಿನಮನ ಸಲ್ಲಿಸಿದರು.
ವಿಭಾಗೀಯ ಪ್ರಭಾರಿ ಜಯತೀರ್ಥ ಕಟ್ಟಿ, ಮಂಡಳ ಅಧ್ಯಕ್ಷ ಮಂಜುನಾಥ ಕಾಟಕರ, ಮೇಯರ್ ದುರ್ಗಮ್ಮ ಬಿಜವಾಡ, ಪಾಲಿಕೆ ಸದಸ್ಯೆ ಪೂಜಾ ಶೇಜವಾಡಕರ ಹಾಗೂ ಇತರರಿದ್ದರು.