Ayodhya ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.
- ಕೆಪಿಸಿಸಿ ಅಧ್ಯಕ್ಷರಿಗೆ ಸಾಮಾನ್ಯ ಜ್ಞಾನ ಇಲ್ಲ
- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ
ಹುಬ್ಬಳ್ಳಿ :
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಠಿಣ ಕ್ರಮ ಕೈಗೊಂಡಿದ್ದು, ಹಲವರನ್ನು ಬಂಧಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರಿಗೆ ಕನಿಷ್ಠ ಸಾಮಾನ್ಯ ಜ್ಞಾನವೂ ಇಲ್ಲ. ಅಷ್ಟೇ ಅಲ್ಲ, ಸಾರ್ವಜನಿಕ ಜೀವನದ ತಿಳಿವಳಿಕೆಯೂ ಅವರಿಗಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಜನರ ಹಾಗೂ ಮಾಧ್ಯಮಗಳ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ನವರು ಆರ್ಎಸ್ಎಸ್ ನಿಷೇಧ ಹಾಗೂ ನೋಂದಣಿ ಬಗ್ಗೆ ಮಾತನಾಡುತ್ತಿದ್ದಾರೆ.
ಈ ಹಿಂದೆ ಆರ್ಎಸ್ಎಸ್ ನಿಷೇಧಿಸಲು ಮುಂದಾದಾಗ ನ್ಯಾಯಾಲಯ ಛೀಮಾರಿ ಹಾಕಿತ್ತು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಎಸ್ಐಆರ್ ವಿರೋಧಿಸುತ್ತಿದ್ದಾರೆ. ದೇಶದ ಹಲವಾರು ರಾಜ್ಯಗಳಲ್ಲಿ ಸೋಲು ಅನುಭವಿಸಿದ್ದಕ್ಕಾಗಿ ಕಾಂಗ್ರೆಸ್ ಎಸ್ಐಆರ್ ವಿರೋಧಿಸುತ್ತಿದೆ.
ಆದರೆ, ಕೇರಳ ಹಾಗೂ ಜಮ್ಮು, ಕಾಶ್ಮೀರದಲ್ಲಿ ಕಾಂಗ್ರೆಸ್ನ ಮಿತ್ರಪಕ್ಷಗಳು ಎಸ್ಐಆರ್ಅನ್ನು ಸ್ವಾಗತಿಸಿವೆ. ಚುನಾವಣೆಗಳಲ್ಲಿ ಗೆಲುವು ಕಂಡಾಗ ಸುಮ್ಮನಿರುವ ಕಾಂಗ್ರೆಸ್ ಮುಖಂಡರು, ಸೋತ ನಂತರ ತಮ್ಮ ಸೋಲನ್ನು ಚುನಾವಣೆ ಆಯೋಗ, ಮತಯಂತ್ರಗಳ ಮೇಲೆ ಹಾಕುವುದು ಮಾಮೂಲಿಯಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಸಂತೋಷ ಲಾಡ್, ಪ್ರಧಾನಿ ಮೋದಿ ಅವರನ್ನು ಮನಬಂದಂತೆ ಟೀಕಿಸಿದರೂ ಅವರಿಗೆ ಮಂತ್ರಿ ಸ್ಥಾನ ಸಿಗಲಿಲ್ಲ. ಪ್ರಧಾನಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವುದೇ ಲಾಡ್ ಕೆಲಸವಾಗಿತ್ತು. ಯಾವ ಸರ್ಕಾರ ಎಷ್ಟು ಅಭಿವೃದ್ಧಿ ಮಾಡಿದೆ ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ ಎಂದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಬಗ್ಗೆ ಸಂಬಂಧಿಸಿದ ಸಚಿವಾಲಯ ನಿರ್ಧರಿಸುತ್ತದೆ ಎಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಮಧ್ಯದ ಬಿಆರ್ಟಿಎಸ್ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಅದು ಅತ್ಯುತ್ತಮ ಯೋಜನೆ ಆಗಲಿದೆ.
ಬಿಆರ್ಟಿಎಸ್ ಕಾರಿಡಾರ್ ಅಗಲ ಕಡಿಮೆ ಮಾಡುವ ಬಗ್ಗೆಯಾಗಲೀ, ಇನ್ನಿತರ ಸಮಸ್ಯೆಗಳ ಕುರಿತಾಗಲೀ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ಜನಪ್ರತಿನಿಧಿಗಳ ಸಭೆ ಕರೆದರೆ ಸೂಕ್ತ ಸಲಹೆ ನೀಡಲಾಗುವುದು ಎಂದರು.