abvp protest ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು. 
ಧಾರವಾಡ

abvp protest ಎಬಿವಿಪಿ ಕಾರ್ಯಕರ್ತರು ವಶಕ್ಕೆ

ಮರಿದೇವ ಹೂಗಾರ

ಹುಬ್ಬಳ್ಳಿ: ಪೊಲೀಸ್ ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯಲ್ಲಾದ

abvp protest

ಲೋಪಗಳಿಂದ ಅಭ್ಯರ್ಥಿಗಳು ಸಮಸ್ಯೆಯ ಸುಳಿಗೆ ಸಿಲುಕಿದ್ದು, ಕೂಡಲೇ ಅವರಿಗೆ ನ್ಯಾಯ ಒದಗಿಸಬೇಕು. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ಅಕ್ರಮಗಳನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನಗರದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ, 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ನಗರದ ಬಿವಿಬಿ ಕಾಲೇಜ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಕೆಎಂಸಿಆರ್‌ಐನ ಮುಖ್ಯ ಗೇಟ್‌ಗೆ ತಲುಪಿ ಮತ್ತೆ ಬಿವಿಬಿಗೆ ಮರಳಿತು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಹಲವರನ್ನು ವಶಕ್ಕೆ ಪಡೆದರು.
ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಬೇಕು. ಕೆಪಿಎಸ್‌ಸಿ ಅಕ್ರಮ ತಡೆಗೆ ಮುಂದಾಗಬೇಕು. ಕಾನ್‌ಸ್ಟೆಬಲ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಲಾಯಿತು.
ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಢಾಂಗೆ, ರಾಜ್ಯ ಕಾರ್ಯದರ್ಶಿ ದರ್ಶನ ಹೆಗಡೆ, ಕೇಂದ್ರೀಯ ಕಾರ್ಯ ಸಮಿತಿ ಸದಸ್ಯ ಸಚಿನ್ ಕುಳಗೇರಿ, ಪ್ರಮುಖರಾದ ಸಿದ್ಧಾರ್ಥ ಕೋರಿ, ಮನೋಜ ವಾಲ್ಮೀಕಿ, ಇತರರಿದ್ದರು.