work ಹುಬ್ಬಳ್ಳಿ ಗೋಕುಲ ರಸ್ತೆ ರವಿ ನಗರದಲ್ಲಿ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೂಮಿಪೂಜೆ ನೆರವೇರಿಸಿದರು.  
ಧಾರವಾಡ

ಸೆಂಟ್ರಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚುರುಕು work

ಪ್ರಮುಖ ಮುಖ್ಯಾಂಶಗಳು

  • ಡಾವಣೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು.
  • ನೀರಿನ ಸಮಸ್ಯೆ ಉದ್ಭವಗೊಳ್ಳದಂತೆ ನೋಡಿಕೊಳ್ಳಲಾಗುತ್ತಿದೆ.
  • 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಗಟಾರು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ.
ಹುಬ್ಬಳ್ಳಿ:
ಗೋಕುಲ ರಸ್ತೆಯ 48ನೇ ವಾರ್ಡ್​ನ ರವಿ ನಗರದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರವಿ ನಗರ ಸುತ್ತಲಿನ ಪ್ರದೇಶದಲ್ಲಿ ಉತ್ತಮ ರಸ್ತೆ ಹಾಗೂ ಗಟಾರುಗಳ ನಿರ್ಮಾಣ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇಲ್ಲಿನ ಬಡಾವಣೆಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.
ಸೆಂಟ್ರಲ್ ಕ್ಷೇತ್ರದಲ್ಲಿ ಗುಣಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಕ್ಷೇತ್ರದ ಎಲ್ಲೆಡೆ ನೀರಿನ ಸಮಸ್ಯೆ ಉದ್ಭವಗೊಳ್ಳದಂತೆ ನೋಡಿಕೊಳ್ಳಲಾಗುತ್ತಿದೆ.
ಸ್ವಚ್ಛ, ಸುಂದರ ಹಾಗೂ ಹಸಿರು ನಗರ ನಿರ್ವಿುಸುವ ಆಶಯಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ವೀಣಾ ಬರದ್ವಾಡ, ಮಹೇಂದ್ರ ದಲಭಂಜನ, ಪ್ರಕಾಶ ಅಕ್ಕಿ, ವಿಜಯಾ ಕುಲಕರ್ಣಿ ಹಾಗೂ ಇತರರಿದ್ದರು.