adgp hitendra ಹು-ಧಾ ಪೊಲೀಸ್ ಆಯುಕ್ತಾಲಯಕ್ಕೆ ಗುರುವಾರ ಭೇಟಿ ನೀಡಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 
ಧಾರವಾಡ

adgp hitendra ಗಣೇಶೋತ್ಸವಕ್ಕಿರಲಿ ಬಿಗಿ ಬಂದೋಬಸ್ತ್

ಹುಬ್ಬಳ್ಳಿ: ಹುಬ್ಬಳ್ಳಿಯ ಗಣೇಶೋತ್ಸವದ ವೇಳೆ ಶಾಂತಿಯುತ ಬಂದೋಬಸ್ತ್ ಕೈಗೊಳ್ಳುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ adgp hitendra ಸಲಹೆ ನೀಡಿದರು.
ನವನಗರದ ಹು-ಧಾ ಪೊಲೀಸ್ ಆಯುಕ್ತಾಲಯಕ್ಕೆ ಗುರುವಾರ ಭೇಟಿ ನೀಡಿದ ಅವರು, ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆಸಿದರು.
ಇದೇ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಅಲ್ಲದೆ, ಹುಬ್ಬಳ್ಳಿ ಶಹರ ಹಾಗೂ ಉಪ ನಗರ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು. ಪೊಲೀಸ್ ಆಯುಕ್ತ ಭೂಷಣ ಬೋರಸೆ, ಡಿಸಿಪಿಗಳಾದ ಶ್ರುತಿ ಎನ್.ಎಸ್., ಸಿ.ಆರ್. ರವೀಶ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಇತರರಿದ್ದರು.