adigas kcd ಧಾರವಾಡ ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಡಿಜಿಟಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಡಿಗಾಸ ಯಾತ್ರಾ ಸಂಸ್ಥೆಯೊಂದಿಗಿನ ಒಪ್ಪಂದ ಪತ್ರಗಳನ್ನು ಅಡಿಗಾಸನ ಮುಖ್ಯಸ್ಥ ನಾಗರಾಜ ಅಡಿಗ ಮತ್ತು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಜಗದೀಶ ಕಿವುಡನವರ ಪರಸ್ಪರ ವಿನಿಮಯ ಮಾಡಿಕೊಂಡರು.
- ಪ್ರವಾಸೋದ್ಯಮ ಬಲಪಡಿಸಲು ಅನುಕೂಲ
- ಉದ್ಯೋಗ ಸೇರಿದಂತೆ ಅನೇಕ ಚಟುವಟಿಕೆಗೆ ಅವಕಾಶ
ಹುಬ್ಬಳ್ಳಿ: adigas kcd ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಮೂಲಕ ಪ್ರವಾಸೋದ್ಯಮ
ಇನ್ನಷ್ಟು ಬಲಪಡಿಸಲು ಸಾಧ್ಯವಿದೆ ಎಂದು ಬೆಂಗಳೂರಿನ ಅಡಿಗಾಸ ಯಾತ್ರಾ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಾಗರಾಜ ಅಡಿಗ ಅಭಿಪ್ರಾಯಪಟ್ಟರು.
ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ಡಿಜಿಟಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಂಸ್ಥೆ ಮತ್ತು ಕರ್ನಾಟಕ ಕಾಲೇಜಿನ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳೆದ 32 ವರ್ಷದಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಡಿಗಾಸ ಸೇವೆ ಒದಗಿಸುತ್ತಿದೆ. ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ವೃತ್ತಿಪರ ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗ ಸೇರಿದಂತೆ ಅನೇಕ ಚಟುವಟಿಕೆ ಮತ್ತು ಅವಕಾಶಗಳನ್ನು ಒದಗಿಸುತ್ತದೆ. ಇದೀಗ ಕಾಲೇಜಿನ ಜೊತೆಗೆ ಗುರುತಿಸಿಕೊಂಡಿರುವದು ಸಂತಸ ತಂದಿದೆ ಎಂದರು.
ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ
ಲು ಸಾಧ್ಯ. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಬೇಕಾದ ಅವಶ್ಯಕತೆ ಇದೆ ಎಂದರು.
ಹೆಚ್ಚು ಉದ್ಯೋಗ ಅವಕಾಶಗಳಿಗೆ ತಕ್ಕಂತೆ ಅನೇಕ ಚಟುವಟಿಕೆಗಳನ್ನು ಆಯೋಜಿಸುತ್ತಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಐ.ಸಿ. ಮುಳಗುಂದ ಮಾತನಾಡಿ, ಪ್ರವಾಸೋದ್ಯಮ ವಿಭಾಗದಿಂದ ಇದು 24ನೇ ಒಪ್ಪಂದ ಆಗಿದೆ. ಅಡಿಗಾಸ ಯಾತ್ರಾ ಸಂಸ್ಥೆ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಉತ್ತಮ ಸೇವೆ ನೀಡುತ್ತಿದೆ. ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈ ಒಪ್ಪಂದ ಅನುಕೂಲ ಆಗಲಿದೆ ಎಂದರು.
ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗದ ವೆಬ್ಸೈಟ್ ಅನ್ನು ನಾಗರಾಜ ಅಡಿಗ ಅವರು ಅನಾವರಣಗೊಳಿಸಿದರು. ಡಾ. ಸುಷ್ಮಾ ಮಳಲಿ, ಡಾ. ಕೇದಾರ, ಪ್ರೊ. ಸಂದೀಪ ಘೋರ್ಪಡೆ, ಡಾ. ಮನಾಲಿ, ಡಾ. ಪ್ರಭಾಕರ ಕಾಂಬಳೆ, ಸಂಸ್ಥೆಯ ಅಧಿಕಾರಿಗಳು ಇದ್ದರು.