ಸಮತಾ ಸೇನಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. 
ಧಾರವಾಡ

ಡಿಸಿ ಕಚೇರಿ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಧಾರವಾಡ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ವಿರುದ್ಧ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಸಮತಾ ಸೇನಾ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದರು.
ಪ್ರತಿಭಟನಾನಿರತ ಕಾರ್ಯಕರ್ತರು ಮಧ್ಯಾಹ್ನ ಏಕಾಏಕಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್​ಗಳನ್ನು ಕಿತ್ತೆಸೆದು ಮುನ್ನುಗ್ಗಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ಹತೋಟಿಗೆ ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.