bjp ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಂಜುನಾಥ ಕಾಟಕರ.
- ಕೇಂದ್ರದಿಂದ ಆರ್ಥಿಕ ನೆರವು ಪಡೆದಿದೆ.
- ವಸತಿ ಸಚಿವರಾಗಿದ್ದ ವಿ. ಸೋಮಣ್ಣ ಭೂಮಿಪೂಜೆ ನೆರವೇರಿಸಿದ್ದರು.
- ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗಿದೆ.
ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ವಿ. ಸೋಮಣ್ಣ ಅವರು 2017ರಲ್ಲಿ ಮಂಟೂರು ರಸ್ತೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1,008 ಮನೆಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು ಎಂದು ಹೇಳಿದರು.
ರಾಜ್ಯದ ವಿವಿಧೆಡೆ ಈ ಯೋಜನೆಯಡಿ ಸರ್ಕಾರ ನಿರ್ವಿುಸಿರುವ ಒಟ್ಟು 42,345 ಮನೆಗಳ ನಿರ್ಮಾಣಕ್ಕೆ ತಲಾ 7.50 ಲಕ್ಷ ರೂ. ವೆಚ್ಚ ಮಾಡಿದೆ. ಇದರಲ್ಲಿ ಕೇಂದ್ರ ಸರ್ಕಾರದಿಂದ ಪಿಎಂಎವೈ ಅಡಿ 1.50 ಲಕ್ಷ ರೂ. ಸಬ್ಸಿಡಿ ನೀಡಲಾಗಿದೆ. ಫಲಾನುಭವಿಗಳಿಂದ 1 ಲಕ್ಷ ರೂ. ಪಡೆದು, ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಿ ಮನೆಗಳನ್ನು ನಿರ್ವಿುಸಲಾಗಿದೆ ಎಂದು ತಿಳಿಸಿದರು.
ಈ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ, ಕೇಂದ್ರದಿಂದ ಆರ್ಥಿಕ ನೆರವು ಪಡೆದಿದೆ. ಆದರೆ, ಸಂಪೂರ್ಣ ಮನೆಗಳನ್ನು ತಮ್ಮ ಸರ್ಕಾರವೇ ನಿರ್ವಿುಸಿದೆ ಎಂಬಂತೆ ಕಾಂಗ್ರೆಸ್ನವರು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಮಹಾನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಕ್ಯಾರಕಟ್ಟಿ ಮಾತನಾಡಿ, ಮಂಟೂರು ರಸ್ತೆಯಲ್ಲಿ ನಿರ್ವಿುಸಿರುವ ಮನೆಗಳನ್ನು ಒಂದು ನಿಗದಿತ ಸಮಾಜಕ್ಕೆ ಹಂಚಿಕೆ ಮಾಡಲಾಗುತ್ತಿದೆ ಆರೋಪಿಸಿದರು.
ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಮಾತನಾಡಿ, ಈ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ವಿಶೇಷ ಕಾಳಜಿ ವಹಿಸಿ, ಕೇಂದ್ರದಿಂದ ಅನುದಾನ ತರಲು ನೆರವಾಗಿದ್ದಾರೆ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮ. ಆದರೆ, ಇದೊಂದು ಕಾಂಗ್ರೆಸ್ ಕಾರ್ಯಕ್ರಮದಂತೆ ಆ ಪಕ್ಷದ ನಾಯಕರು ಬಿಂಬಿಸುತ್ತಿದ್ದಾರೆ ಎಂದು ದೂರಿದರು.
ಡಾ. ಕ್ರಾಂತಿಕಿರಣ, ಶಿವು ಮೆಣಸಿನಕಾಯಿ, ವಿಜಯ ಗುಂಟ್ರಾಳ, ಶಶಿಕಾಂತ ಬಿಜವಾಡ, ರಾಜು ಕೋರ್ಯಾಣಮಠ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.