biz vista ಹುಬ್ಬಳ್ಳಿಯ ಐಬಿಎಂಆರ್ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಬಿಜ್ ವಿಸ್ಟಾ ಮ್ಯಾನೇಜಮೆಂಟ್ ಫೆಸ್ಟ್ ಉದ್ಘಾಟನೆಯಲ್ಲಿ ಡಾ. ವಿ.ಎಸ್.ವಿ. ಪ್ರಸಾದ, ವಿನಯಚಂದ್ರ ಮಹೇಂದ್ರಕರ, ಡಾ. ರೇಖಾ ಮಹೇಂದ್ರಕರ, ಡಾ. ಇಗ್ನೇಶ ಸಕ್ರಿ, ಡಾ. ಅರುಣ ಶೆಟ್ಟಿ, ಇತರರು ಪಾಲ್ಗೊಂಡಿದ್ದರು.
ಹುಬ್ಬಳ್ಳಿ: biz vista ಇಲ್ಲಿಯ ವಿದ್ಯಾನಗರ ಐಬಿಎಂಆರ್ ಸಮೂಹ ಸಂಸ್ಥೆಯ ಎಂಬಿಎ ಮಹಾವಿದ್ಯಾಲಯದಲ್ಲಿ ಬಿಜ್ ವಿಸ್ಟಾ- 2026 ರಾಷ್ಟ್ರೀಯ ಮ್ಯಾನೇಜಮೆಂಟ್ ಫೆಸ್ಟ್ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಯಶಸ್ವಿಯಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸ್ವರ್ಣ ಸಮೂಹ ಸಂಸ್ಥೆಯ ಎಂಡಿ ಡಾ. ವಿ.ಎಸ್.ವಿ. ಪ್ರಸಾದ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆರ್ಥಿಕ ವ್ಯವಹಾರ ಹಾಗೂ ದೇಶದ ಅಭಿವೃದ್ಧಿಯ ಕುರಿತು ಸಮಗ್ರ ಚಿಂತನೆಗಳನ್ನು ಹೊಂದಿರಬೇಕು. ಇಂತಹ ಉತ್ಸವಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲಗಳನ್ನು ವೃದ್ಧಿಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಐಬಿಎಂಆರ್ ಅಧ್ಯಕ್ಷ ವಿನಯಚಂದ್ರ ಮಹೇಂದ್ರಕರ್, ವಿದ್ಯಾರ್ಥಿಗಳಿಗೆ ನಿರಂತರ ಪರಿಶ್ರಮ ಮತ್ತು ದೃಢ ಸಂಕಲ್ಪ ಅಗತ್ಯ. ಇದರ ಮೂಲಕ ವಿದ್ಯಾರ್ಥಿಗಳು ಯಶಸ್ಸಿನ ಶಿಖರ ಏರಬಹುದು. ಸಾಧನೆ ನಂತರ ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.