ಬಿಜೆಪಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಘಟಕದದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. 
ಧಾರವಾಡ

ಕಾಂಗ್ರೆಸ್​ನಿಂದ ಗೂಂಡಾವರ್ತನೆ ಆರೋಪಿಸಿ ಬಿಜೆಪಿ ಪ್ರತಿಭಟನೆ

ಮಂಜುನಾಥ ಅಂಗಡಿ
ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆಯ ಹೆಸರಿನಲ್ಲಿ ಅಸಭ್ಯವಾಗಿ ನಡೆದುಕೊಂಡ ಕಾಂಗ್ರೆಸ್​ ನಾಯಕರ ಹಾಗೂ ಕಾರ್ಯಕರ್ತರು ಗೂಂಡಾವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಘಟಕದದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್​ ಪಕ್ಷ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ರೀತಿಯಲ್ಲಿ ವತಿರ್ಸುತ್ತಿದೆ. ಹತಾಶ ಮನೋಭಾವದಿಂದ ಇಂತಹ ಅಪ್ರಜಾಸತ್ತಾತ್ಮಕ ಹಾಗೂ ಪುಂಡಾಟಿಕೆಯ ಹಾದಿ ಹಿಡಿದಿದೆ. ದೇಶದ ಉನ್ನತ ಹುದ್ದೆಯಲ್ಲಿರುವ ಪ್ರಧಾನಮಂತ್ರಿ ನಿವಾಸದ ಬಳಿ ಅಶಾಂತಿ ನಿಮಿರ್ಸಲು ಯತ್ನಿಸಿರುವುದು ಅವರ ಕೀಳು ಮಟ್ಟದ ರಾಜಕಾರಣ ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರು ದೇಶದ ಜನರ ಕ್ಷಮೆ ಯಾಚಿಸಬೇಕು. ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ರಾಜಕೀಯ ಲಾಭಕ್ಕಾಗಿ ನೈತಿಕತೆ ಮರೆಯುವ ಕೃತ್ಯ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.