protests ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. 
ಧಾರವಾಡ

ವಿಧೇಯಕ ಹಿಂಪಡೆಯಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ (protests)

ಪ್ರಮುಖ ಮುಖ್ಯಾಂಶಗಳು

  • ವಿಧೇಯಕ ಸಂವಿಧಾನಕ್ಕೆ ವಿರುದ್ಧ.
  • ಸತ್ಯ ಹೇಳುವುದನ್ನು ಸಹ ದ್ವೇಷವೆಂದು ಪರಿಗಣಿಸುವ ಅಪಾಯವಿದೆ.
  • ಧಾರವಾಡ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.
ಸರ್ಕಾರ ಜಾರಿಗೊಳಿಸುತ್ತಿರುವ ವಿಧೇಯಕ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಈ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ವಿಧೇಯಕ ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಅಭಿವ್ಯಕ್ತಿ ಸ್ವಾತಂತ್ರವನ್ನು ಕಿತ್ತುಕೊಳ್ಳುತ್ತದೆ. ಸರ್ಕಾರದ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನು ಸಹ ದ್ವೇಷವೆಂದು ಪರಿಗಣಿಸುವ ಅಪಾಯವಿದೆ ಎಂದು ದೂರಿದರು.
ಗೃಹಲಕ್ಷಿ್ಮೕ ಯೋಜನೆಯಡಿ 5 ಸಾವಿರ ಕೋಟಿ ರೂ. ಹಗರಣ ನಡೆದಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷಿ್ಮೕ ಹೆಬ್ಬಾಳ್ಕರ ವಿರುದ್ಧ ಘೋಷಣೆ ಕೂಗಿದರು.
ಧಾರವಾಡ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿವೆ ಎಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರ ವಿರುದ್ಧವೂ ಘೊಷಣೆಗಳನ್ನು ಕೂಗಿದರು. ತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟ್ಕರ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಈಶ್ವರಗೌಡ ಪಾಟೀಲ, ಪ್ರಭು ನವಲಗುಂದಮಠ, ನಾರಾಯಣ ಜರತಾರಘರ, ಶಿವು ಮೆಣಸಿನಕಾಯಿ, ವಸಂತ ನಾಡಜೋಶಿ, ರಂಗಾ ಕಠಾರೆ, ಅನುಪ ಬಿಜವಾಡ, ವೆಂಕಟೇಶ ಕಾಟವೆ, ಮಹೇಂದ್ರ ಕೌತಾಳ, ಲಕ್ಷಿ್ಮೕಕಾಂತ ಘೋಡಕೆ, ರಾಜು ಕೋರ್ಯಾಣಮಠ, ರಾಜು ಕಾಳೆ, ಅಕ್ಕಮ್ಮ ಹೆಗಡೆ, ನಾಗರತ್ನಾ ಬಳ್ಳಾರಿ, ಸವಿತಾ ಚವ್ಹಾಣ, ಅಮೃತ ಪವಾರ, ಕೃಷ್ಣಾ ಗಂಡಗಾಳೇಕರ, ನಾರಾಯಣ ಹಬೀಬ, protestsನೀಲಕಂಠ ತಡಸದಮಠ, ಇತರರು ಇದ್ದರು.