victory ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಿಸಿದರು. 
ಧಾರವಾಡ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ victory

ಆನಂದಕುಮಾರ ಅಂಗಡಿ

ಪ್ರಮುಖ ಮುಖ್ಯಾಂಶಗಳು

  • ಅಕ್ರಮ ಬಾಂಗ್ಲಾ ನಿವಾಸಿಗಳಿಗೆ ಸಮಸ್ಯೆ ತಪ್ಪಿದ್ದಲ್ಲ
  • ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಕಂಡಿದೆ.
  • ಬಾಂಗ್ಲಾ ಜನರ ಅನಧಿಕೃತ ವಾಸ ಹೆಚ್ಚಾಗಿತ್ತು
ಹುಬ್ಬಳ್ಳಿ :
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ ಷಾಗೆ ಬಿಜೆಪಿ ಕಾರ್ಯಕರ್ತರು ಜಯಕಾರ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಪ್ರಧಾನಿ ನರೇಂದ್ರ ಮೋದಿ ಆಡಳಿತದ ಗ್ಯಾರಂಟಿ ಹೊರತುಪಡಿಸಿ, ಇನ್ಯಾವ ಗ್ಯಾರಂಟಿಗಳೂ ಬೇಡವೆಂದು ಮತದಾರರು ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಕಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದ ಗೆಲುವು ಸಂತಸ ಮೂಡಿಸಿದೆ ಎಂದರು.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿತ್ತು. ಅಲ್ಲಿನ ಮಹಿಳೆಯರು ಸುರಕ್ಷಿತವಾಗಿ ಇರಲಿಲ್ಲ. ಬಾಂಗ್ಲಾ ದೇಶದ ಜನರ ಅನಧಿಕೃತ ವಾಸ ಹೆಚ್ಚಾಗಿತ್ತು ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಲ್ಲಿನ ಅಕ್ರಮ ಬಾಂಗ್ಲಾ ನಿವಾಸಿಗಳಿಗೆ ಸಮಸ್ಯೆ ತಪ್ಪಿದ್ದಲ್ಲವೆಂದು ಬಾಂಗ್ಲಾದ ಸಂಸದರೊಬ್ಬರು ನೀಡಿದ್ದ ಹೇಳಿಕೆ ಗಮನಿಸಿದರೆ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತ ಅದೆಷ್ಟು ಹದಗೆಟ್ಟಿತ್ತು ಎಂಬುದು ಗೊತ್ತಾಗುತ್ತದೆ ಎಂದರು.
ಪಶ್ಚಿಮ ಬಂಗಾಳದ ಶೇ. 92ರಷ್ಟು ಮತದಾರರು ಮತ ಚಲಾವಣೆ ಮಾಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. 5 ರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿದೆ.
ತಮಿಳುನಾಡಿನಲ್ಲಿ ಎನ್​ಡಿಎ ಮಿತ್ರ ಪಕ್ಷಗಳು ಅಧಿಕಾರಕ್ಕೆ ಬರುವುದು ಖಚಿತ. ಕೇರಳದಲ್ಲಿ 2 ಸ್ಥಾನಗಳು ಬಂದಿವೆ ಎಂದು ಹೇಳಿದರು.
ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರದ ದುರುಪಯೋಗ ಪಡಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಜನರು ರೋಸಿ ಹೋಗಿದ್ದನ್ನು ಚುನಾವಣೆ ಸಾಬೀತುಪಡಿಸಿದೆ. ಆ ರಾಜ್ಯದಲ್ಲಿ ಬಿಜೆಪಿ ಗೆಲುವು ದೊಡ್ಡ ಸಾಧನೆ.
ತಮಿಳುನಾಡಿನಲ್ಲಿ ಬಹುಮತ ಸಿಗದಿದ್ದರೂ ಉತ್ತಮ ಫಲಿತಾಂಶ ಸಿಕ್ಕಿದೆ. ಬಿಜೆಪಿ ತತ್ವ ಸಿದ್ದಾಂತಕ್ಕೆ ಸಿಕ್ಕ ಗೆಲುವು ಅದಾಗಿದೆ ಎಂದು ಹೇಳಿದರು.
ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ವೆಂಕಟೇಶ ಕಾಟವೆ, ಪ್ರವೀಣ ಪವಾರ, ರಾಮನಗೌಡ ಶೆಟ್ಟಿನಗೌಡ್ರ, ಅಕ್ಕಮ್ಮ ಹೆಗಡೆ, ಅರ್ಚನಾ ಕೆ., ಉಮಾ ಮುಕುಂದ, ಶಿವು ಮೆಣಸಿನಕಾಯಿ, ಸವಿತಾ ಚವ್ಹಾಣ ಹಾಗೂ ಇತರರಿದ್ದರು.