brahman students ಹುಬ್ಬಳ್ಳಿಯಲ್ಲಿ ಭಾನುವಾರ ಬ್ರಾಹ್ಮಣ ಮಹಾಸಭಾದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಗೋವಿಂದ ಜೋಶಿ, ಎಚ್​.ಎನ್​. ನಂದಕುಮಾರ, ಲಕ್ಷ$್ಮಣ ಕುಲಕಣಿರ್, ಹನುಮಂತ ಡಂಬಳ, ಡಾ. ಎನ್​.ಎಸ್​. ರವೀಶ್​ ಇತರರು ಇದ್ದರು. 
ಧಾರವಾಡ

brahman students ಮಕ್ಕಳಿಗೆ ಪಾಲಕರು ಮಾನವೀಯ ಮೌಲ್ಯ ಕಲಿಸಲಿ

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ
  • ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ

ಹುಬ್ಬಳ್ಳಿ:

brahman students

ಮಕ್ಕಳು ಶೈಕ್ಷಣಿಕವಾಗಿ ಉತ್ತಮ ಅಂಕ ಪಡೆದು ಸಾಧನೆ ಮಾಡುವುದು ಎಷ್ಟು ಮಹತ್ವದ್ದೋ ಪಾಲಕರು ಅವರಿಗೆ ಉತ್ತಮ ಸಂಸ್ಕಾರ ನೀಡಿ ಮಾನವೀಯ ಮೌಲ್ಯಗಳನ್ನು ಕಲಿಸುವುದೂ ಅಷ್ಟೇ ಪ್ರಮುಖವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.

ಫೌಂಡೇಷನ್

ಮಕ್ಕಳಿಗಾಗಿ ಸಾಲ ಸೋಲ ಮಾಡಿ ಅನೇಕ ಪಾಲಕರು ಉನ್ನತ ವಾಸಂಗ ಮಾಡಿಸುತ್ತಾರೆ. ಬಹಳಷ್ಟು ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ, ನೌಕರಿ ಎಂದು ಪರದೇಶಕ್ಕೆ ಹೋಗಿ ಪಾಲಕರನ್ನು ಮರೆತು ಬಿಡುತ್ತಾರೆ. ಇಂತಹ ಸಾಧನೆ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಮೂಡುತ್ತದೆ ಎಂದ ಜೋಶಿ, ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯವಾಗಿದೆ. ದೇಶದ ಶಿಕ್ಷಣ ನೀತಿಯಲ್ಲಿಯೂ ಇದನ್ನು ಅಡಕ ಮಾಡುವ ಕೆಲಸ ಆಗುತ್ತಿದೆ ಎಂದರು.
ಅನೇಕ ಜನ ಪಾಶ್ಚಾತ್ಯರು ಭಾರತದ ಕುಟುಂಬ ವ್ಯವಸ್ಥೆಯನ್ನು ಅಧ್ಯಯನ ಮಾಡಲು ಬರುತ್ತಿದ್ದಾರೆ. ಮಾನಸಿಕ ನೆಮ್ಮದಿ, ಶಾಂತಿಗಾಗಿ ಇಲ್ಲಿಗೆ ಬರುತ್ತಿದ್ದಾರೆ. ಇಂತಹ ಅಮೂಲ್ಯ ಸಂಸ್ಕೃತಿಯನ್ನು ನಾವೆಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮುಂದಿನ ಪೀಳಿಗೆಗೆ ಕುಟುಂಬ ವ್ಯವಸ್ಥೆಯ ಮಹತ್ವ ತಿಳಿಸಿ ಕೊಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾಸಭಾ ಅಧ್ಯಕ್ಷ ಎಸ್​. ರಘುನಾಥ್​ ಪ್ರಾಸ್ತಾವಿಕ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಮಾಜದ ಸಂಘಟನೆ ಬಲಪಡಿಸುವ ಮಹೋನ್ನತ ಉದ್ದೇಶವೂ ಇದೆ. ಮುಂಬರುವ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ಮಾಡಲಾಗುವುದು. ಗದಗನಲ್ಲಿ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಆಯೋಜಿಸಲಾಗುವುದು ಎಂದರು.

ರಾಜ್ಯದ ವಿವಿಧ ಜಿಲ್ಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅವರಿಗೆ 2500ರೂ. ನಗದು ಹಾಗೂ ಸ್ಮರಣಿಕೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಸುಮಾರು 400 ವಿದ್ಯಾರ್ಥಿಗಳಿಗೆ ಸ್ಕಾಲರಶಿಪ್​ ನೀಡುವ ಉದ್ದೇಶ ಇದೆ. ಮಕ್ಕಳು ಇದರ ಪ್ರಯೋಜನ ಪಡೆದು ಉತ್ತಮ ಪ್ರಜೆಯಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ಉದ್ಯಮಿಗಳಾದ ಎಚ್​.ಎನ್​. ನಂದಕುಮಾರ, ಗೋವಿಂದ ಜೋಶಿ ಮಾತನಾಡಿದರು. ಶಿವಮೊಗ್ಗ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎನ್​.ಎಸ್​. ರವೀಶ್​, ಮಕ್ಕಳಿಗೆ ಸ್ಪೂರ್ತಿದಾಯಕ ಭಾಷಣ ಮಾಡಿದರು.

ದತ್ತಮೂರ್ತಿ

ಕುಲಕರ್ಣಿ

, ಇತರರು ಉಪಸ್ಥಿತರಿದ್ದರು.

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗ

ಳಿಗೆ ಪುರಸ್ಕಾರ ನೀಡಲಾಯಿತು.