ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರ್
ಧಾರವಾಡ: ಇಲ್ಲಿನ ಬೈಪಾಸ್ನಲ್ಲಿ ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಸಂರ್ಪೂಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದಿದ್ದರಿಂದ ಅದೃಷ್ಟವಶಾತ್ ಅನಾಹುತ ತಪ್ಪಿದೆ.
ಹುಬ್ಬಳ್ಳಿಯ ಮೊಹ್ಮದ್ಆಸೀ್ ಶೇಖಸನದಿ ಎಂಬುವರ ಕಾರ್ ಇದಾಗಿದ್ದು, ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದರು. ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಕಾರನ್ನು ಕೂಡಲೇ ರಸ್ತೆ ಬದಿ ನಿಲ್ಲಿಸಿದ್ದಾನೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡು ಆಹುತಿಯಾಗಿದೆ.