Central Bank of India ಪ್ರಥಮ ರಾಜ್ಯಭಾಷಾ ಕೀರ್ತಿ ಪ್ರಶಸ್ತಿಯನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಇಒ ಕಲ್ಯಾಣಕುಮಾರ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದರು.
ಹುಬ್ಬಳ್ಳಿ: ಮುಂಬೈನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಖಿಲ ಭಾರತ ರಾಜ್ಯಭಾಷಾ ಸಮ್ಮೇಳನದಲ್ಲಿ Central Bank of India ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರಥಮ ರಾಜಭಾಷಾ ಕೀರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ರಾಜಭಾಷಾ ಇಲಾಖೆ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಲ್ಯಾಣಕುಮಾರ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಡಿಸಿಎಂ ಏಕನಾಥ ಶಿಂಧೆ, ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ದೋಹರೆ, ಮುಖ್ಯ ಪ್ರಧಾನ ವ್ಯವಸ್ಥಾಪಕ ಕುಶಾಲ್ ಪಾಲ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಹಿತೇಂದ್ರ ಧುಮಾಲ್ ಇತರರಿದ್ದರು.