ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ (power). 
ಧಾರವಾಡ

ಬಜೆಟ್ ನಂತರ ಅಧಿಕಾರ (power) ಬದಲಾವಣೆ

ಪ್ರಮುಖ ಮುಖ್ಯಾಂಶಗಳು

  • ಸಿಎಂ ಸ್ಥಾನದಿಂದ ಕೆಳಗೆ ಇಳಿಯುವುದು ಖಚಿತ.
  • ಬಿಜೆಪಿ ಹೈಕಮಾಂಡ್ ಅವಕಾಶ ಕೊಡುವುದಿಲ್ಲ.
  • ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸತೀಶ ಜಾರಕಿಹೊಳಿ ಹಾಗೂ ಜಿ. ಪರಮೇಶ್ವರ ಅವರು ದಲಿತ ಕೋಟಾದಡಿ ಸಿಎಂ ಸ್ಥಾನಕ್ಕೆ ಪೈಪೋಟೆ ನಡೆಸಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸರ್ಕಾರ ಕೆಡವಲು ಹುನ್ನಾರ ನಡೆಸಿದ್ದಾರೆ. ಡಿ. ಕೆ. ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಡಿ. ಕೆ. ಶಿವಕುಮಾರ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟು, ತಾನು ಉಪ ಮುಖ್ಯಮಂತ್ರಿಯಾಗಬೇಕೆಂದು ವಿಜಯೇಂದ್ರ ಯತ್ನಿಸುತ್ತಿದ್ದು, ಇದಕ್ಕೆ ಬಿಜೆಪಿ ಹೈಕಮಾಂಡ್ ಅವಕಾಶ ಕೊಡುವುದಿಲ್ಲ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಈ ಭಾಗದ ಶಾಸಕರು, ಸಚಿವರು ಆಸಕ್ತಿಯಿಂದ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು ಎಂದರು.