ಶ್ರೀ ಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ
ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗಹ ಹಿರೇಮಠದ ಕರ್ತೃಪುರುಷ ಶ್ರೀ ಗುರುಶಾಂತಲಿಂಗ ಶಿವಯೋಗಿಗಳ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಪುಷ್ಪಗಳಿಂದ ಅಲಂಕರಿಸಲಾಗಿದ್ದ ರಥಕ್ಕೆ ಅಮ್ಮಿನಬಾವಿ ಪಂಚಗಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯರ ಸನ್ನಿಧಾನದಲ್ಲಿ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯರು ಪೂಜೆ ಸಲ್ಲಿಸಿದರು.
ಸವದತ್ತಿ ಮೂಲಿಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು, ಮೊರಬ ಜಡಿಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು, ಕಲಬುಗಿರ್ ಜಿಲ್ಲೆ ಬೆಳಗುಂಪಾ ಬಹನ್ಮಠದ ಶ್ರೀ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ವಿಜಯನಗರ ಜಿಲ್ಲೆ ಹಂಪಸಾಗರ ನವಲಿಹಿರೇಮಠದ ಶ್ರೀ ಅಭಿನವ ಶಿವಲಿಂಗರುದ್ರಮುನಿ ಶಿವಾಚಾರ್ಯರು, ಇತರರು ಪಾಲ್ಗೊಂಡಿದ್ದರು.
ಕರಡಿಮಜಲು, ಡೊಳ್ಳು, ಸಂಬಾಳ ಸೇರಿ ವಿವಿಧ ಜನಪದ ವಾದ್ಯ&ಮೇಳಗಳೊಂದಿಗೆ ಆರಂಭಗೊಂಡ ರಥೋತ್ಸವವು ಸಂಸ್ಥಾನ ಪಂಚಗಹ ಹಿರೇಮಠದಿಂದ ಹೊರಟು ಮುಖ್ಯಪೇಟೆ ರಸ್ತೆಯಲ್ಲಿ ಸಂಚರಿಸಿ ಕರಡಿಗುಡ್ಡ ರಸ್ತೆಗೆ ಹೊಂದಿಕೊಂಡ ಈಶ್ವರ ದೇವಾಲಯದವರೆಗೆ ತೆರಳಿ, ಅಲ್ಲಿಂದ ಸಂಸ್ಥಾನ ಪಂಚಗಹ ಹಿರೇಮಠಕ್ಕೆ ಮರಳಿತು. ಭಕ್ತರು ಅಲಂಕತ ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಿದರು. ಸುತ್ತಲಿನ ಗ್ರಾಮಸ್ಥರು ಸಂಭ್ರಮದ ರಥೋತ್ಸವಕ್ಕೆ ಸಾಕ್ಷಿಯಾದರು.