(Child marriage) ಬಾಲಕಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ
ಹುಬ್ಬಳ್ಳಿ: ಇಲ್ಲಿಯ ಹಳೇಹುಬ್ಬಳ್ಳಿಯ ಮ್ಯಾರೇಜ್ ಹಾಲ್‌ನಲ್ಲಿ ಕಳೆದ ವರ್ಷ ನಡೆದಿದ್ದ (Child marriage) ಬಾಲ್ಯ ವಿವಾಹದ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಮೂಲದ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿ ಜತೆಗೆ ಮದುವೆಯಾಗಿದ್ದ. ಬಾಲಕಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ್ದ. ಅಪ್ರಾಪ್ತಳಾಗಿದ್ದರೂ ಕುಟುಂಬದವರೆಲ್ಲ ಸೇರಿ ಮದುವೆ ಮಾಡಿಸಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹ್ಮದ್‌ಅಲಿ ತಹಸೀಲ್ದಾರ್, ಐವರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.