ಹುಬ್ಬಳ್ಳಿಯಲ್ಲಿ ಮಂಗಳವಾರ (Chilly mela) ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಗಿರೀಶ ಮಾತನಾಡಿದರು. ಪ್ರಧಾನ ವ್ಯವಸ್ಥಾಪಕ ಡಾ. ರಾಮಚಂದ್ರ ಮಡಿವಾಳ ಇದ್ದರು.  
ಧಾರವಾಡ

ಹುಬ್ಬಳ್ಳಿಯಲ್ಲಿ (Chilly mela) ಒಣ ಮೆಣಸಿನಕಾಯಿ ಮೇಳ 6ರಿಂದ

ಸಂತೋಷ ವೈದ್ಯ
ಹುಬ್ಬಳ್ಳಿ: ಇಲ್ಲಿಯ ಮೂರು ಸಾವಿರ ಮಠದ (Chilly mela) ಹೈಸ್ಕೂಲ್ ಮೈದಾನದಲ್ಲಿ ಫೆ. 6 ರಿಂದ 8 ರವರೆಗೆ ಒಣ ಮೆಣಸಿನಕಾಯಿ ಮೇಳ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಗಿರೀಶ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ನೇರವಾಗಿ ಮಾರಾಟ ಮಾಡಲು ಮೆಣಸಿನಕಾಯಿ ಬೆಳೆಗಾರರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಈ ಕುರಿತು ಮುಂಚಿತವಾಗಿ ಹುಬ್ಬಳ್ಳಿ, ಧಾರವಾಡ ಹಾಗೂ ನವಲಗುಂದ ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ ಹಾಗೂ ಮಂಡಳಿಯ ಹುಬ್ಬಳ್ಳಿಯ ಕಚೇರಿಯಲ್ಲಿ ಮುಂಚಿತವಾಗಿ ಹೆಸರು ನೋಂದಾಯಿಸಬೇಕಾಗುತ್ತದೆ. ಈ ಬಾರಿ 100 ಜನ ಮೆಣಸಿನಕಾಯಿ ಬೆಳೆಗಾರರಿಗೆ ಅವಕಾಶವಿದೆ ಎಂದರು.
ಇದು 14ನೇ ಮೇಳವಾಗಿದೆ. ಕಳೆದ ವರ್ಷ ನವನಗರ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದಾಗ ಗ್ರಾಹಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಬೆಳೆಗಾರರಿಗೂ ನಿರಾಸೆಯಾಗಿತ್ತು. ಕೇವಲ 71 ಲಕ್ಷ ರೂ. ವಹಿವಾಟು ಆಗಿತ್ತು. ಹಾಗಾಗಿ ಈ ಬಾರಿ ಜನರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಳ ಬದಲಾಯಿಸಿದ್ದೇವೆ. 2018-19ರ ಮೇಳದಲ್ಲಿ 65 ಲಕ್ಷ ರೂ., 2019-20ರಲ್ಲಿ 77 ಲಕ್ಷ ರೂ., 2022-23ರಲ್ಲಿ 1.10 ಕೋಟಿ ರೂ., 2023-24ರಲ್ಲಿ 1.37 ಕೋಟಿ ರೂ. ವಹಿವಾಟು ಆಗಿತ್ತು ಎಂದು ತಿಳಿಸಿದರು.
ಫೆ. 6ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಳಿಗೆಗಳನ್ನು ಉದ್ಘಾಟಿಸುವರು ಎಂದರು.