Belagavi MP Spoke about CM
- ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯಿತು.
- ಯಾರೊಬ್ಬರನ್ನೂ ಏಕೆ ಬಂಧಿಸಿಲ್ಲ ?
- ಆರೋಪ ಪಟ್ಟಿ ಸಲ್ಲಿಸಿರುವ ಎಸ್ಐಟಿ
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯಿತು. ಸದ್ಯ ಎಸ್ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ಆದರೆ, ಯಾರನ್ನೂ ಬಂಧಿಸಿಲ್ಲ ಎಂದರು.
ಸಮಾಜವಾದಿ, ಎಡ ಪಂಥೀಯ ಗ್ಯಾಂಗ್ ಪ್ರಚೋದನೆಯಿಂದ ಎಸ್ಐಟಿ ರಚನೆಯಾಯಿತು. ಯಾವುದೇ ಸಾಕ್ಷಿ, ಪುರಾವೆ ಇಲ್ಲದೆಯೇ ಧರ್ಮಸ್ಥಳದ ಅಪಪ್ರಚಾರಕ್ಕೆಂದೇ ಎಸ್ಐಟಿ ರಚಿಸಲಾಯಿತು ಎಂದು ದೂರಿದರು.
ಆರೋಪ ಪಟ್ಟಿ ಸಲ್ಲಿಸಿರುವ ಎಸ್ಐಟಿ ಕೆಲವರು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದೆ. ಆದರೆ, ಇದುವರೆಗೆ ಯಾರೊಬ್ಬರನ್ನೂ ಏಕೆ ಬಂಧಿಸಿಲ್ಲ ? ಎಂದು ಶೆಟ್ಟರ್ ಪ್ರಶ್ನಿಸಿದರು.
ಬುರುಡೆ ಗ್ಯಾಂಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ಆಶೀರ್ವಾದ ಇರುವ ಕಾರಣದಿಂದ ಇದುವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ. ಇನ್ನಾದರೂ ನಿಜವಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.