life ಹುಬ್ಬಳ್ಳಿಯ ಡಿ.ಕೆ.ಎಸ್. ಶಿಕ್ಷಣ ಟ್ರಸ್ಟ್ನ ಚೇತನ ಕಾಲೇಜ್ನಲ್ಲಿ ಆಯೋಜಿಸಿದ್ದ ಆಗಮನ ಕಾರ್ಯಕ್ರಮವನ್ನು ಲೆಕ್ಕ ಪರಿಶೋಧಕ ನಟರಾಜ ಮುಶಿಲ್ಲಿ ಉದ್ಘಾಟಿಸಿದರು.
- ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಲಭಿಸುತ್ತವೆ.
- ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.
- ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಹುಬ್ಬಳ್ಳಿ :
ಡಿ.ಕೆ.ಎಸ್. ಶಿಕ್ಷಣ ಟ್ರಸ್ಟ್ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೇತನ ಕಾಲೇಜ್ ಆಫ್ ಕಾಮರ್ಸ್, ಬಿಬಿಎ ಮತ್ತು ಬಿಸಿಎ, ಬಿಕಾಂ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಆಗಮನ-2026 ಇಂಡಕ್ಷನ್ ಮತ್ತು ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನಕ್ಕಿಂತಲೂ ಕೌಶಲ್ಯ, ಶಿಸ್ತು, ಆತ್ಮವಿಶ್ವಾಸ ಮತ್ತು ನಿರಂತರ ಕಲಿಕೆಯ ಮನೋಭಾವವೇ ಯಶಸ್ಸಿನ ನಿಜವಾದ ಕೀಲಿ ಕೈ ಎಂದರು.
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು ಅದನ್ನು ಸಾಧಿಸಲು ನಿರಂತರ ಪರಿಶ್ರಮ ಪಡಬೇಕು ಎಂದು ಸಲಹೆ ನೀಡಿದರು.
ಸಮಯದ ಮೌಲ್ಯವನ್ನು ಅರಿತು ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಹೊಸ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು.
ವಿಫಲತೆಗೆ ಹೆದರದೆ ಅದನ್ನೇ ಯಶಸ್ಸಿನ ಮೆಟ್ಟಿಲಾಗಿ ಪರಿವರ್ತಿಸಿಕೊಳ್ಳುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ನಾಯಕತ್ವ ಗುಣ, ಸಂವಹನ ಕೌಶಲ್ಯ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯನ್ನು ವಿದ್ಯಾರ್ಥಿ ಜೀವನದಲ್ಲಿಯೇ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಲಭಿಸುತ್ತವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಡಿ.ಕೆ.ಎಸ್. ಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಡಾ. ವಿ.ಎಂ. ಕೊರವಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಸಾಮಾಜಿಕ ಜವಾಬ್ದಾರಿ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅತಿಥಿಯಾಗಿದ್ದ ಡಾ. ಅಶೋಕ ವಡಕಣ್ಣವರ, ಉನ್ನತ ಶಿಕ್ಷಣದ ಮಹತ್ವ ಹಾಗೂ ಶೈಕ್ಷಣಿಕ ಸಾಧನೆಗಳ ಕುರಿತು ಮಾರ್ಗದರ್ಶನ ನೀಡಿದರು.
ಪ್ರಾಂಶುಪಾಲ ಡಾ. ಪವನ ಅಪರಂಜಿ ಅವರು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ಪಠ್ಯೇತರ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಅವಕಾಶಗಳ ಕುರಿತು ಮಾಹಿತಿ ನೀಡಿದರು.
ಡಾ. ರಮಾಕಾಂತ ಕುಲಕರ್ಣಿ, ಡಾ. ಕಿಶೋರ ಪಾಂಗಿ, ಡಾ. ಶಿಲ್ಪಾ ಕುಲಕರ್ಣಿ, ಡಾ. ಭಾರತಿ ಬಡಿಗೇರ, ಪ್ರೊ. ವೀಣಾ ಕುಂಶಿ, ಪ್ರೊ. ಸ್ವಾತಿ ಕಣ್ಮಡಿ, ಪ್ರೊ. ಸ್ವಾತಿ ಕ್ಯಾತಣ್ಣವರ, ಪ್ರೊ. ಭಾಗ್ಯಶ್ರೀ ಬಳಿಗಾರ ಹಾಗೂ ಇತರರಿದ್ದರು.