time ಫ್ಲೈ ಓವರ್ ಕಾಮಗಾರಿ ಕುರಿತು ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು.
- ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ.
- ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿ ಸಹಿಸುವುದಿಲ್ಲ.
- 15 ದಿನಗಳ ನಂತರ ಮತ್ತೆ ಪ್ರಗತಿ ಪರಿಶೀಲನೆ ನಡೆಸಲಾಗುವುದು.
ಫ್ಲೈ ಓವರ್ ಕಾಮಗಾರಿ ಕುರಿತು ಲೋಕೋಪಯೋಗಿ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿ ಸಹಿಸುವುದಿಲ್ಲ. ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಹೇಳಿದರು.
15 ದಿನಗಳ ನಂತರ ಮತ್ತೆ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಪ್ರತಿ ಸೋಮವಾರ ಕಾಮಗಾರಿ ಕುರಿತು ವಿಸ್ತಾರವಾದ ವರದಿ ನೀಡಲು ಎಲ್ಲ ಮುಖ್ಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗದೆ ಎಂದು ತಿಳಿಸಿದರು.
ಈ ಹಿಂದೆ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಹಲವಾರು ಸೂಚನೆಗಳನ್ನು ನೀಡಲಾಗಿತ್ತು. ಅವುಗಳೆಲ್ಲ ತಪ್ಪದೇ ಅಳವಡಿಕೆಯಾಗಬೇಕು. ಕಾಮಗಾರಿಗೆ ತಕ್ಕಂತೆ ಕಾರ್ವಿುಕರನ್ನು ನಿಯೋಜಿಸಬೇಕು ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಬಸವರಾಜ ಬಂಡಿವಡ್ಡರ, ಅಧೀಕ್ಷಕ ಪ್ರದೀಪ, ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಸತೀಶ ನಾಗನೂರ, ಗುತ್ತಿಗೆದಾರ ಶರ್ಮಾ ಹಾಗೂ ಇತರರ ಸಭೆಯಲ್ಲಿ ಇದ್ದರು.