ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ 
ಧಾರವಾಡ

ಎಸ್‌ಐಆರ್ ಪ್ರಕ್ರಿಯೇ ಶೀಘ್ರದಲ್ಲಿಯೇ ಪೂರ್ಣಗೊಳಿಸಿ

ಜಗದೀಶ ಹೊಂಬಳಿ
ಧಾರವಾಡ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಗಣತಿ ನಮೂನೆಗಳನ್ನು ವಿತರಿಸಿ, ಶೀಘ್ರದಲ್ಲಿಯೇ ಶೇ. 100ರಷ್ಟು ಪ್ರಗತಿ ಸಾಧಿಸಬೇಕು. ಪ್ರತಿಯೊಬ್ಬ ವ್ಯಕ್ತಿಗೂ ನಮೂನೆಗಳು ತಲುಪಬೇಕು. ಯಾವುದೇ ಅರ್ಹ ವ್ಯಕ್ತಿಯು ಮತಪಟ್ಟಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್‌ಐಆರ್ ಪ್ರಗತಿ ಪರಿಶೀಲಿಸಿ ಮಾತನಾಡಿದರು. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಸಕಾಲದಲ್ಲಿ ನೀಡಬೇಕು. ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಪರಿಷ್ಕರಣೆ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿಯನ್ನು ಅಽಕೃತವಾಗಿ ಹಂಚಿಕೊಳ್ಳಬೇಕು ಎಂದರು.
ಪರಿಷ್ಕರಣೆ ಕಾರ್ಯದ ಪ್ರಗತಿ ಹಾಗೂ ಎದುರಾಗುವ ಸಮಸ್ಯೆಗಳ ಕುರಿತು ವಾರಕ್ಕೊಮ್ಮೆ ರಾಜಕೀಯ ಪಕ್ಷಗಳ ಪ್ರತಿನಿಽಗಳೊಂದಿಗೆ ಸಭೆ ನಡೆಸಬೇಕು. ಸಭೆಯಲ್ಲಿ ಪಡೆದ ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ದಾಖಲಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಯ ಎಲ್ಲ ಬಿಎಲ್‌ಒ ಅವರು ಎಎಸ್‌ಡಿಡಿ ಯಾದಿಗಳನ್ನು ತಯಾರಿಸಿ, ಸಂಬಂಧಿಸಿದ ಮತಗಟ್ಟೆಗಳ ಬಿಎಲ್‌ಎ ಅವರಿಗೆ ನೀಡಿ, ಯಾದಿಗಳನ್ನು ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಪರಿಶೀಲಿಸಲು ತಿಳಿಸಿದರು. ಸ್ಥಳಾಂತರಗೊಂಡ ಮತದಾರರ ಯಾದಿಯಲ್ಲಿರುವ ಯಾವುದೇ ಮತದಾರರು ಪುನಃ ಅವರ ವಾಸ ಸ್ಥಳದಲ್ಲಿರುವುದು ಕಂಡುಬಂದಲ್ಲಿ, ಅಂತಹ ಮತದಾರರ ವಿವರಗಳನ್ನು ಎಎಸ್‌ಡಿಡಿ ಯಾದಿಯಿಂದ ಹಿಂಪಡೆದು ನಿಯಮಾನುಸಾರ ಮುಂದಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಸ್ಥಳಾಂತರ ಮತದಾರರ ಯಾದಿಯಲ್ಲಿರುವ ಮತದಾರರು ಯಾವುದೇ ಮಾಹಿತಿಗಾಗಿ ಸಂಬಂಧಪಟ್ಟ ಮತಗಟ್ಟೆಯ ಬಿಎಲ್‌ಓ, ಸಹಾಯಕ ಮತದಾರರ ನೋಂದಣಾಽಕಾರಿಗಳು ಮತ್ತು ಮತದಾರರ ನೋಂದಣಾಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಹೇಳಿದರು.
ನವಲಗುಂದ ವಿಧಾನಸಭಾ ಕ್ಷೇತ್ರ, ಕುಂದಗೋಳ, ಧಾರವಾಡ ಗ್ರಾಮೀಣ, ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ಹಾಗೂ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 100 ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರ ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ 33,510 ಗಣತಿ ನಮೂನೆ ವಿತರಣೆ ಕಾರ್ಯ ಬಾಕಿ ಇದ್ದು, ಆದಷ್ಟು ಬೇಗನೆ ವಿತರಣೆ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೆಷನರಿ ಐಎಎಸ್ ಅಽಕಾರಿ ಅನುಪ್ರೀಯಾ ಸಾಕ್ಯಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಉಪವಿಭಾಗಾಽಕಾರಿ ಪ್ರಭಾವತಿ ಪಕೀರಪುರ, ಪಾಲಿಕೆಯ ಆಯುಕ್ತ ಡಾ. ರುದ್ರೇಶ್ ಘಾಳಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇತರರಿದ್ದರು.