ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ 
ಧಾರವಾಡ

ಗ್ಯಾಸ್ ಸಿಲಿಂಡರ್ ದರ ಏರಿಕೆಗೆ ಖಂಡನೆ

ಧಾರವಾಡ: ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿ, ಗ್ಯಾಸ್ ಸಿಲಿಂಡರ್ ಕೊರತೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಬಡವರ ಮೇಲೆ ಕಾಳಜಿ ಇಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೇ ಬಂದಿದೆ. ಈಗ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿ ಜನರ ಬದುಕಿನ ಮೇಲೆ ಬರೆ ಎಳೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕಾದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಗ್ಯಾಸ್ ಸಿಲಿಂಡ್ ಬೆಲೆ ಏರಿಕೆ ಬಿಸಿ ತಟ್ಟಿದೆ. 8 ದಿನದಲ್ಲಿ ಏರಿಕೆ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಲಾಯಿತು. ಇಸ್ಮಾಯಿಲ್ ತಮಟಗಾರ, ತವನಪ್ಪ ಅಷ್ಟಗಿ, ನಿಖಿಲ ಶಂಕರ್, ಮೊಹಮ್ಮದ ಸಯ್ಯದ, ಅಜಮತಲಿ ಮುಲ್ಲಾ, ಸೊಯೆಬ್ ನದಾಫ್, ದೇವರಾಜ ಪರಸಪ್ಪನವರ, ಅರುಣ ಅಮ್ಮಿನಾಭಾವಿ, ಯೂಸುಫ್ ಗೋಲಾಂದಾಸ, ವಿಕಾಶ ತಡ್ಡೆವಾಡಿ, ಅಮರಶಿವಾ ಶಿವಳ್ಳಿ ಇತರರಿದ್ದರು.