congress ಕೇಂದ್ರ ಸಚಿವ ಪ್ರಲ್ಹಾದ ಜೋಶಿ
- ಡಿಲಿಮಿಟೇಷನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆ
- ಬಿಬಿಎಂಪಿ ಯನ್ನೇಕೆ ಡಿಲಿಮಿಟೇಷನ್ ಮಾಡಿದಿರಿ
- ರಾಜೀವ ಗಾಂಧಿ ಅವರು ಒಬಿಸಿ ಮೀಸಲಾತಿಯನ್ನು ವಿರೋಧಿಸಿದ್ದರು
ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ ಅವರು ಎಸ್ಸಿ, ಎಸ್ಟಿ ಮೀಸಲಾತಿಯನ್ನು ಮತ್ತು ರಾಜೀವ ಗಾಂಧಿ ಅವರು ಒಬಿಸಿ ಮೀಸಲಾತಿಯನ್ನು ವಿರೋಧಿಸಿದ್ದರು. ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ದೂರಿದರು.
ಜನಗಣತಿ ಆಧಾರಿತವಾಗಿ ಕ್ಷೇತ್ರ ಪುನರ್ವಿಂಗಡಣೆ ಮಾಡಿದರೆ ದಕ್ಷಿಣ ರಾಜ್ಯಗಳಿಗೆ ಹಾಗೂ ಸಣ್ಣ ರಾಜ್ಯಗಳಿಗೆ ಅನ್ಯಾಯ ಆಗುತ್ತದೆ ಎಂಬುದು ಕಾಂಗ್ರೆಸ್ನ ಮೊಂಡು ವಾದ. ಪದೇ ಪದೆ ದಕ್ಷಿಣ ಭಾರತ, ಉತ್ತರ ಭಾರತ ಎಂದೆಣಿಸುತ್ತ, ಈಗ ಡಿಲಿಮಿಟೇಷನ್ ವಿಚಾರದಲ್ಲೂ ಅದೇ ವರ್ತನೆಯನ್ನು ಆ ಪಕ್ಷದವರು ತೋರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಲಿಮಿಟೇಷನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆ ಇದ್ದದ್ದೇ ನಿಜವಾದರೆ, ಬಿಬಿಎಂಪಿ ಯನ್ನೇಕೆ ಡಿಲಿಮಿಟೇಷನ್ ಮಾಡಿದಿರಿ ಎಂದು ಪ್ರಶ್ನಿಸಿದರು.
ಹತಾಸೆ, ನಿರಾಸೆ ಹಾಗೂ ಭಯದ ವಾತಾವರಣದಿಂದಾಗಿ ಕಾಂಗ್ರೆಸ್ ಮಹಿಳಾ ಮೀಸಲಾತಿ ಹಾಗೂ ಲೋಕಸಭೆ ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸುತ್ತಿದೆ ಎಂದು ಟೀಕಿಸಿದರು.