congress protest ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ದೀಕರಣ ಮಾಡಿರುವ ಕೋಮು ಶಕ್ತಿಗಳ ನಡೆ ಖಂಡಿಸಿ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. 
ಧಾರವಾಡ

congress protest ಕೋಮು ಶಕ್ತಿಗಳ ವಿರುದ್ಧ ಆಕ್ರೋಶ

ಮರಿದೇವ ಹೂಗಾರ
ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು congress protest ಭಾಷಣ ಮಾಡಿದ ವೇದಿಕೆ ಶುದ್ದೀಕರಣ ಮಾಡಿರುವ ಕೋಮು ಶಕ್ತಿಗಳ ನಡೆ ಖಂಡಿಸಿ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಇಲ್ಲಿಯ ಸ್ಟೇಷನ್ ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಕೇಂದ್ರದ ಬಿಜೆಪಿ ಸರ್ಕಾರ, ಕೋಮು ಶಕ್ತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಚಾರ ಸಮಿತಿ ಅಧ್ಯಕ್ಷ ಮೋಹನ ಹಿರೇಮನಿ ಮಾತನಾಡಿ, ಕೋಮು ಶಕ್ತಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣ ಮಾಡಿದ್ದಾರೆ. ಈ ಮೂಲಕ ತಮ್ಮ ಮನಸ್ಥಿತಿಯನ್ನು ತೋರಿಸಿಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶ ಪೂರಿತವಾಗಿ ಪ್ರಕರಣ ದಾಖಲಿಸಿರುವುದು ಹಾಗೂ ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿರುವುದು ಖಂಡನೀಯ ಎಂದು ಹರಿಹಾಯ್ದರು.
ಪ್ರಮುಖರಾದ ಗಂಗಾಧರ ದೊಡವಾಡ, ಗಣೇಶ ದೊಡ್ಡಮನಿ, ಮಾರುತಿ ಬಾರಕೇರ, ಸಂತೋಷ ಜಕ್ಕಪ್ಪನವರ, ದಶರಥ ವಾಲಿ, ಮೋಹನ ಗೌಡರ, ಶಿವಾನಂದ ಮುತ್ತಣ್ಣವರ, ಪುಷ್ಪಾ ಅರಳಿಕಟ್ಟಿ ಇತರರು ಪ್ರತಿಭಟನೆಯಲ್ಲಿದ್ದರು.