ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (congress protest)ಖಂಡಿಸಿ ಹುಬ್ಬಳ್ಳಿಯ ಕೇಶ್ವಾಪುರದ ರಮೇಶ ಭವನ ಹತ್ತಿರ ಪ್ರತಿಭಟನೆ ನಡೆಸಿದ ಹು-ಧಾ ಮಹಾನಗರ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು. 
ಧಾರವಾಡ

(congress protest) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ (congress protest) ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೂಡಲೇ ಕೇಂದ್ರ ಸಚಿವ ಧಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹು-ಧಾ ಮಹಾನಗರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಲ್ಲಿಯ ಕೇಶ್ವಾಪುರದ ರಮೇಶ ಭವನ ಹತ್ತಿರ ಬುಧವಾರ ಪ್ರತಿಭಟನೆ ನಡೆಯಿತು.
ನೀಟ್ ಪ್ರಶ್ನೆ ಪತ್ರಿಕೆ ಪದೇ ಪದೆ ಸೋರಿಕೆಯಾಗುತ್ತಿದೆ. ಇದರಿಂದ ದೇಶಾದ್ಯಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವೇ ಇದರಲ್ಲಿ ನೇರವಾಗಿ ಭಾಗಿಯಾಗಿದೆ. ಕೂಡಲೇ ಕೇಂದ್ರ ಸಚಿವ ಧಮೇಂದ್ರ ಪ್ರಧಾನ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ರಮೇಶ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿತ್ತು. ಇದರ ಮಧ್ಯೆಯೇ ಉತ್ತರ ವಿಭಾಗದ ಎಸಿಪಿ ಶಿವಾನಂದ ಚಲವಾದಿ ನೇತೃತ್ವದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಹು-ಧಾ ಮಹಾನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ಕೇಂದ್ರ ಸರ್ಕಾರವು ಇದರಲ್ಲಿ ನೇರವಾಗಿ ಭಾಗಿಯಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವಲ್ಲಿ ವಿಫಲವಾಗಿದೆ. ಮರು ಪರೀಕ್ಷೆ ಬರೆದರೂ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯುವ ಸಾಧ್ಯತೆ ಕಡಿಮೆ. ನೀಟ್ ಪರೀಕ್ಷೆಯನ್ನು ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುವ ಘಟಕದ ರಾಜ್ಯ ಕಾರ್ಯದರ್ಶಿ ನಾಗರಾಜ ಕೊಟಗಿ ಮಾತನಾಡಿ, ಸತತ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ.ದೇಶದ ದೊಡ್ಡ ಹಗರಣವಿದು. ನ್ಯಾಯ ದೊರೆಯುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರಮುಖರಾದ ಸುನೀಲ ಮರಾಠೆ, ಖಾಸಿಂ ಕೂಡಲಗಿ, ರಾಹುಲ್ ಉಪ್ಪಲದಿನ್ನಿ, ನಿಂಗರಾಜ ನೂಲ್ವಿ, ಸಂತೋಷ ನಾಯಕ್, ಅಕ್ಷಯ ಕುರಿ, ಮಂಜುನಾಥ ಉಪ್ಪಾರ, ರಿತೇಶ ಕಲ್ಯಾಣಿ ಇತರರು ಪ್ರತಿಭಟನೆಯಲ್ಲಿದ್ದರು.