ಧಾರವಾಡ: ಇಲ್ಲಿನ ಹಾಶ್ಮಿನಗರದಲ್ಲಿ ಶುಕ್ರವಾರ ರಾತ್ರಿ ಹತ್ಯೇಗಿಡಾದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಶವವನ್ನು ಬೆಂಬಲಿಗರು ಶನಿವಾರ ಉಪನಗರ ಠಾಣೆ ಎದುರು ಇಟ್ಟು ಪ್ರತಿಭಟಿಸಲು ಯತ್ನಿಸಿದರು. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ ನೇತೃತ್ವದಲ್ಲಿ ಬೆಂಬಲಿಗರು ಪ್ರತಿಭಟನೆಗೆ ಯತ್ನಿಸಿದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಕೆ.ಸಿ. ಪಾರ್ಕ್ ಎದುರು ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಮನವೊಲಿಸಿ ಶವವನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.