ಅಳ್ನಾವರ ತಾಲೂಕಿನ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಭೇಟಿ ನೀಡಿದರು.
ಧಾರವಾಡ: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಭೇಟಿ ನೀಡಿದರು.
ಗ್ರಾಮದ ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚಚಿರ್ಸಿದರು. ವಿಬಿ ಜಿರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಇಂದಿರಮ್ಮ ಕೆರೆ ಪುನರುಜ್ಜೀವನ ಹೂಳೆತ್ತುವ ಕಾಮಗಾರಿ ಪರಿವೀಕ್ಷಣೆ ಮಾಡಿ, ಕೂಲಿ ಕಾಮಿರ್ಕರೊಂದಿಗೆ ಚಚಿರ್ಸಿದರು. ಅಳ್ನಾವರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಪಿಡಿಒ, ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿ ಉಪಸ್ಥಿತರಿದ್ದರು.