ಹು-ಧಾ ಪೂರ್ವ (Development work) ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಮೋಹನ ಅಸುಂಡಿ, ಶ್ರೀನಿವಾಸ ಬೆಳಗಡಿ, ಇತರರು ಇದ್ದಾರೆ. 
ಧಾರವಾಡ

ಕ್ಷೇತ್ರದ ಸಮಗ್ರ (Development work) ಅಭಿವೃದ್ಧಿಗೆ ಬದ್ಧ

ಸಂತೋಷ ವೈದ್ಯ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ(Development work) ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜತೆಗೆ ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ 12 ವರ್ಷದಲ್ಲಿ ಪೂರ್ವ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಹೆಚ್ಚು ಒತ್ತು ನೀಡಬೇಕು. ಜನರು ಸಹ ಸಹಾಕಾರ ನೀಡಬೇಕು ಎಂದು ಹೇಳಿದರು.
ಐದಕ್ಕೂ ಹೆಚ್ಚು ಪ್ರದೇಶದಲ್ಲಿ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಇವು ಜನರಿಗೆ ಆರೋಗ್ಯ ಸಂಜಿವಿನಿಯಾಗಿ ಪ್ರತಿದಿನ ಉಚಿತವಾಗಿ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿವೆ. ಮೂರು ಮೌಲಾನಾ ಅಜಾದ್ ಪ್ರೌಢಶಾಲೆಗಳು ಪಪೂ ಕಾಲೇಜಿಗೆ ಉನ್ನತ್ತೀಕರಣಗೊಂಡಿವೆ ಎಂದು ಹೇಳಿದರು.
ವಾರ್ಡ್ ನಂ.77ರ ಬನ್ನೂರುಮಠ ಓಣಿಯಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿಯಿಂದ 15 ಲಕ್ಷ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಗೌಸಟೌನ್ ಗಾರ್ಡನ್​ನಲ್ಲಿ ಶಾಸಕರ ಅನುದಾನದಲ್ಲಿ ನಿರ್ವಣಗೊಂಡ ಶುದ್ಧ ನೀರಿನ ಘಟಕ ಉದ್ಘಾಟನೆ ಹಾಗೂ ಮಂಟೂರು ರಸ್ತೆಯಲ್ಲಿ ಬರುವ ಸ್ಮಶಾನ ಭೂಮಿ ಅಭಿವೃದ್ಧಿ ಕಾಮಗಾರಿಗೆ ಅಬ್ಬಯ್ಯ ಚಾಲನೆ ನೀಡಿದರು.