ಜ್ಞಾನಸಿಂಚನ ನೇರ ಫೋನ್ ಇನ್​ ಕಾರ್ಯಕ್ರಮ 
ಧಾರವಾಡ

ಭಯಮುಕ್ತರಾಗಿ ಪರೀಕ್ಷೆ ಎದುರಿಸಲು ಜಿಲ್ಲಾಧಿಕಾರಿ ಸಲಹೆ

ಧಾರವಾಡ: ಮಕ್ಕಳು ಪರೀಕ್ಷೆ ಒತ್ತಡಕ್ಕೆ ಒಳಗಾಗದೆ ಭಯಮುಕ್ತರಾಗಿ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಮಂಡಳಿ ನೀಡಿರುವ ಮಾದರಿ ಪ್ರಶ್ನೆಪತ್ರಿಕೆ ಮತ್ತು ಪಾಠ ಆಧಾರಿತ ಪ್ರಶ್ನೆಗಳನ್ನು ಅಧ್ಯಯನ ಮಾಡಿ ಉತ್ತಮ ಅಂಕ ಗಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್​ ಆರ್​. ಹೇಳಿದರು.
ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಲಿತಾಂಶ ಸುಧಾರಣೆಗಾಗಿ ಶಾಲಾ ಶಿಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ "ಜ್ಞಾನಸಿಂಚನ' ನೇರ ಫೋನ್ ಇನ್​ ಕಾರ್ಯಕ್ರಮದಲ್ಲಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.
ಜ್ಞಾನಸಿಂಚನ ನೇರ ಫೋನ್ ಇನ್​ ಕಾರ್ಯಕ್ರಮವು 18, 20, 23 ಮತ್ತು 25ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5ರವರೆಗೆ ನಡೆಯುತ್ತದೆ. ಈಗಾಗಲೇ ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಿಗೆ ಜ್ಞಾನಸಿಂಚನ ನೇರ ಫೋನ್​ ಇನ್​ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ವಿಷಯಗಳ 20ಕ್ಕೂ ಹೆಚ್ಚು ಮೊಬೈಲ್​ ಸಂಖ್ಯೆಗಳನ್ನು ನೀಡಲಾಗಿದೆ. ವಿದ್ಯಾಥಿರ್ಗಳು ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ 43 ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಮಕ್ಕಳು ಪರೀೆಗೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಳಿ ಪರಿಹಾರ ಕಂಡುಕೊಂಡರು.
ಉಪ ನಿರ್ದೇಶಕರ ಕಚೇರಿಯ ಶಿಣಾಧಿಕಾರಿಗಳು, ಡಿವೈಪಿಸಿಗಳು, ವಿಷಯ ಪರಿವೀಕರು ಮತ್ತು ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.