ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ.
ಧಾರವಾಡ: ಮಳೆಯಿಂದ ಅಥವಾ ಇತರೆ ಕಾರಣಗಳಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡರೆ ಹೆಸ್ಕಾಂ ಅಧಿಕಾರಿಗಳು ತಣ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು. ಕಾಳ ಸಂತೆಯಲ್ಲಿ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯತೆ ವಹಿಸಿ ಅವರು ಮಾತನಾಡಿದರು.
ಎಲ್ಲ ತಾಲೂಕುಗಳಲ್ಲಿ ಕೆಪಿಟಿಸಿಎಲ್ ಸವೇ ಕಾರ್ಯ ಆರಂಭಗೊಂಡಿದೆ. ಬಾಡಿಗೆ ಮನೆಯಲ್ಲಿ ವಾಸಿಸುವವರು ಕೈಬರಹದ ಬಾಡಿಗೆ ಪತ್ರವನ್ನು ಮತ್ತು ಆಧಾರ್ ಕಾರ್ಡ್ ಸಲ್ಲಿಸಿ ಗೃಹಜ್ಯೋತಿ ಸೌಲಭ್ಯ ಪಡೆಯಬಹುದು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಮಾತನಾಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್ ರರ ಐನಾಪೂರಿ, ರತ್ನಾ ತೇಗೂರಮಠ, ಸುಧೀರ ಬೋಳಾರ ಮಾತನಾಡಿದರು.