environment day ಹುಬ್ಬಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು. ಭವರಲಾಲ್ ಸಿ. ಜೈನ್, ಭರತ ಭಂಡಾರಿ, ಸೋಹನ್ ತಾಟೇದ್, ಅಭಿಷೇಕ ಮೆಹತಾ, ಎಂ. ವಿಜಯಲಕ್ಷ್ಮಿ ಇತರರು ಇದ್ದರು.
- ಶಾಲೆಯ ಪರಿಸರ ಜಾಗೃತಿ ಕಾರ್ಯಗಳಿಗೆ ಶ್ಲಾಘನೆ
- ಶಾಂತಿನಿಕೇತನ ಸ್ಕೂಲ್ನಲ್ಲಿ ಪರಿಸರ ದಿನಾಚರಣೆ
ಹುಬ್ಬಳ್ಳಿ: environment day ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಇಲ್ಲಿಯ ಘಂಟಿಕೇರಿಯ ಎಸ್ಜೆಆರ್ವಿಪಿ ಮಂಡಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ಸಿಬಿಎಸ್ಇ) ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಸಿಬ್ಬಂದಿ ಉತ್ಸಾಹದಿಂದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲೆ ಆವರಣದಲ್ಲಿ ಹಲವು ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಂಡಳಿ ನಿರ್ದೇಶಕ ಸೋಹನ್ ತಾಟೇದ್ ಅವರು, ಪ್ರಕೃತಿ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಹೆಚ್ಚಿನ ಮರಗಳನ್ನು ನೆಡುವುದು, ನೀರನ್ನು ಮಿತವಾಗಿ ಬಳಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರವನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.
ಮಂಡಳಿಯ ಅಧ್ಯಕ್ಷ ಭವರಲಾಲ್ ಸಿ. ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಪರಿಸರ ಜಾಗೃತಿ ಕಾರ್ಯಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.