ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ (SIT) ಮಾತನಾಡಿದ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯೆ ಸಿ. ಮಂಜುಳಾ. ಜಿಲ್ಲಾ ಅಧ್ಯಕ್ಷೆ ಸೀಮಾ ಲದ್ವಾ, ಶೋಭಾ ಅನಸಿನಗೌಡರ ,ರಾಜೇಶ್ವರಿ ಸಾಲಗಟ್ಟಿ ಇದ್ದರು. 
ಧಾರವಾಡ

ಎಸ್​ಐಟಿ (SIT) ರಚಿಸಿ ತನಿಖೆ ನಡೆಸಿ

ಪ್ರಮುಖ ಮುಖ್ಯಾಂಶಗಳು

  • ಅಪ್ರಾಪ್ತೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ವಿರುದ್ಧ ಕ್ರಮದ ಬಗ್ಗೆ ಸದನದಲ್ಲಿ ಉತ್ತರಿಸಿ
  • ರಾಜ್ಯದ ಬಹುತೇಕ ಹೆಣ್ಣು ಮಕ್ಕಳ ಹಾಸ್ಟೆಲ್​ಗಳಲ್ಲಿ ಪುರುಷ ವಾರ್ಡನ್​ಗಳು ಇದ್ದಾರೆ.
  • ಇದುವರೆಗೆ ಎಷ್ಟು ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ರಾಪ್ತ ವಯಸ್ಸಿನವರು ಗರ್ಭಿಣಿ ಆಗುವುದನ್ನು ತಡೆಯಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ಸದನದಲ್ಲಿ ಉತ್ತರಿಸಬೇಕು. ಇದನ್ನು ತಡೆಯಲು ತಕ್ಷಣ ಎಸ್​ಐಟಿ (SIT) ರಚಿಸಿ, ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಆರೋಪಗಳು ಕೇಳಿಬಂದ ಸಂದರ್ಭದಲ್ಲಿ ಸರ್ಕಾರ ತಡಮಾಡದೇ ಎಸ್​ಐಟಿ ರಚನೆ ಮಾಡಿತ್ತು. ಆದರೆ, ರಾಜ್ಯದಲ್ಲಿ ಬಾಲ ಗರ್ಭಿಣಿಯರು ಹೆಚ್ಚುತ್ತಿದ್ದರೂ ಎಸ್​ಐಟಿ ರಚನೆಗೆ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಬಹುತೇಕ ಹೆಣ್ಣು ಮಕ್ಕಳ ಹಾಸ್ಟೆಲ್​ಗಳಲ್ಲಿ ಪುರುಷ ವಾರ್ಡನ್​ಗಳು ಇದ್ದಾರೆ. ತಕ್ಷಣ ಅಲ್ಲಿ ಮಹಿಳಾ ವಾರ್ಡನ್​ಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
ಅಪ್ರಾಪ್ತ ಯುವತಿಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷಿ್ಮೕ ಹೆಬ್ಬಾಳ್ಕರ ಅವರು ಏನು ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಹಾಸ್ಟೆಲ್​ಗಳಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಚಿವೆ ಇದುವರೆಗೆ ಒಂದೂ ಪ್ರತಿಕ್ರಿಯೆ ನೀಡಿಲ್ಲ. ಅವರು ಇದುವರೆಗೆ ಎಷ್ಟು ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದರು.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹೆಣ್ಣ ಮಕ್ಕಳಿಗೆ ರಕ್ಷಣೆ ಸಿಗುತ್ತಿಲ್ಲ. ಬಾಗಲಕೋಟೆ, ವಿಜಯಪುರ, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಅಪ್ರಾಪ್ತ ಗರ್ಭಿಣಿಯರು ಹೆಚ್ಚುತ್ತಿದ್ದಾರೆ. ಇದರಿಂದಾಗಿ ಅಪ್ರಾಪ್ತೆಯರು ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದರು.
ಕಾರ್ವಿುಕ ಸಚಿವ ಸಂತೋಷ ಲಾಡ್ ಅವರು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾತನಾಡುತ್ತಾರೆ. ನೇಹಾ, ಅಂಜಲಿ ಹಾಗೂ ಬೆಳಗಾವಿಯಲ್ಲಿ ಯುವತಿಯರ ಹತ್ಯೆಯಾದಾಗ ಸರ್ಕಾರ ತ್ವರಿತ ನ್ಯಾಯಾಲಯ ಸ್ಥಾಪನೆಯ ಬಗ್ಗೆ ಭರವಸೆ ನೀಡಿತ್ತು. ಆದರೆ, ಇದುವರೆಗೆ ಆ ಭರವಸೆ ಈಡೇರಿಲ್ಲ. ಇದೆಲ್ಲ ಸಚಿವ ಲಾಡ್ ಅವರಿಗೆ ಕಾಣಿಸುವುದೇ ಇಲ್ಲ ಎಂದು ಟೀಕಿಸಿದರು.
ಸಂಸದೆ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುತ್ತಿಲ್ಲವೆಂದು ದೂರುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಉದ್ಯೋಗಕ್ಕಾಗಿ ನಡೆದ ಹೋರಾಟವನ್ನು ರಾಜ್ಯ ಸರ್ಕಾರ ಪೊಲೀಸರ ಮೂಲಕ ಹತ್ತಿಕ್ಕುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಏಕವಚನದಲ್ಲಿ ಮಾತನಾಡುತ್ತಾರೆ. ಪ್ರಿಯಾಂಕಾ ಗಾಂಧಿ ಅವರಿಗೆ ಇವೆಲ್ಲ ಕಾಣುವುದಿಲ್ಲವೇ ? ಎಂದು ಪ್ರಶ್ನಿಸಿದರು.
ಅಪ್ರಾಪ್ತೆಯರ ಮೇಲಿನ ದೌರ್ಜನ್ಯಗಳ ಕುರಿತು ರ್ಚಚಿಸುವುದಕ್ಕಾಗಿ ಡಿ. 13ರಂದು ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷೆ ಸೀಮಾ ಲದ್ವಾ, ಶೋಭಾ ಅನಸಿನಗೌಡರ ,ರಾಜೇಶ್ವರಿ ಸಾಲಗಟ್ಟಿ ಇದ್ದರು.